ಬೆಳಗಾವಿ: ಕೊರೊನಾ ಸೋಂಕಿತೆಗೆ ಯಶಸ್ವಿ ಹೆರಿಗೆ ಮಾಡಿಸಿದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದ ಪ್ರಾಥಮಿಕ ಕೇಂದ್ರದ ನರ್ಸ್‌ಗೆ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ ಸಲ್ಲಿಸಿದ್ದಾರೆ.
ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ: ಬೆಳಗಾವಿ ನರ್ಸ್‌ಗೆ ಅಭಿನಂದನೆ ಸಲ್ಲಿಸಿದ ಡಾ.ಸುಧಾಕರ್
ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾದ ಕೋವಿಡ್ ಪಾಸಿಟಿವ್ ಗರ್ಭಿಣಿಗೆ ಧೈರ್ಯ ತುಂಬಿ ಹೆರಿಗೆ ಮಾಡಿಸಿದ ವೈದ್ಯಕೀಯ ಸಿಬ್ಬಂದಿ ಕಾರ್ಯ ಶ್ಲಾಘನೀಯ ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಕೋವಿಡ್ ತುರ್ತುಪರಿಸ್ಥಿತಿಯಲ್ಲಿ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಾದ ಕೋವಿಡ್ ಪಾಸಿಟಿವ್ ಗರ್ಭಿಣಿಗೆ ಧೈರ್ಯ ತುಂಬಿ ಹೆರಿಗೆ ಮಾಡಿಸಿದ ಡಾ. ಮಂಜುನಾಥ್ ದಳವಾಯಿ, ನರ್ಸ್, ರಾಣಿ ಲಖನ್ಗೌಡ ಸೇರಿದಂತೆ ಎಲ್ಲ ವೈದ್ಯ ಸಿಬ್ಬಂದಿ ಕಾರ್ಯ ಶ್ಲಾಘನೀಯ. ಅವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಹಲಸಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೆಳಗಾವಿ ತಾಲೂಕಿನ ಹಲಗಾದ ಸೋಂಕಿತ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಡಾ. ಮಂಜುನಾಥ ದಳವಾಯಿ ಮಾರ್ಗದರ್ಶನದಂತೆ ನರ್ಸ್ ರಾಣಿ ಲಖನಗೌಡ ಅವರು ಪಿಪಿಇ ಕಿಟ್ ಧರಿಸಿ ಹೆರಿಗೆ ಮಾಡಿಸಿದ್ದಾರೆ. ಕೊರೊನಾ ಸೋಂಕಿತೆ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ತಾಯಿ ಮಗು ಇಬ್ಬರು ಆರೋಗ್ಯವಾಗಿದ್ದು, ವೈದ್ಯಕೀಯ ಸಿಬ್ಬಂದಿ ಕಾರ್ಯಕ್ಕೆ ಸಚಿವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.