ಬೆಳಗಾವಿ :ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ದೇಶಕ್ಕೆ ರಾಯಣ್ಣನ ಕೊಡುಗೆ ಅಪಾರ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ನಗರದ ಬಸವರಾಜ ಕಟ್ಟಿಮನಿ ಸಭಾಂಗಣದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಿತ್ತೂರು ಸಂಸ್ಥಾನದ ರಕ್ಷಣೆಗೆ ನಿಂತ ಸಂಗೊಳ್ಳಿ ರಾಯಣ್ಣ ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕಾಗಿ ಅವರ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ದೇಶದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಅನೇಕ ಮಹನೀಯರು ಪ್ರಾಣತ್ಯಾಗ ಮಾಡಿದ್ದು, ಅದರಲ್ಲಿ ರಾಯಣ್ಣ ಪಾತ್ರ ಬಹಳ ಮಹತ್ವದಾಗಿದೆ ಎಂದರು.
ಕಿತ್ತೂರು ನಾಡನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಸಂಗೊಳ್ಳಿ ರಾಯಣ್ಣನಿಗೆ ಸಲ್ಲುತ್ತದೆ. ನಾಡಿಗೆ ರಾಯಣ್ಣನ ಕೊಡುಗೆ ಅಪಾರವಾಗಿದ್ದು, ಭವಿಷ್ಯದಲ್ಲಿ ಎಲ್ಲಾ ಯುವ ಪೀಳಿಗೆಯಲ್ಲಿ ರಾಯಣ್ಣನ ನೆನಪು ಶಾಶ್ವತವಾಗಿ ಉಳಿಯಲಿದೆ ಎಂದರು.