ಕರ್ನಾಟಕ

karnataka

ETV Bharat / state

ಬಿಜೆಪಿ ತೆಕ್ಕೆಗೆ ಬೆಳಗಾವಿ ಪಾಲಿಕೆ: ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಕಾರಜೋಳ - ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ

ಬೆಳಗಾವಿ ಪಾಲಿಕೆ ಚುನಾವಣೆಗೆ ನಾನೇ ಉಸ್ತುವಾರಿ ಆಗಿದ್ದೆ. ಪಕ್ಷದ ಅಧ್ಯಕ್ಷರು ನೀಡಿದ ಜವಾಬ್ದಾರಿ ಯಶಸ್ವಿಯಾಗಿ ನಿರ್ವಹಿಸಿದ್ದೇನೆ ಎನ್ನುವ ತೃಪ್ತಿ ನನಗಿದೆ ಎಂದು ಗೋವಿಂದ ಕಾರಜೋಳ ವಿಡಿಯೋ ಸಂದೇಶದ ಮೂಲಕ ತಿಳಿಸಿದ್ದಾರೆ.

ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಕಾರಜೋಳ
ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಕಾರಜೋಳ

By

Published : Sep 6, 2021, 11:59 AM IST

Updated : Sep 6, 2021, 12:34 PM IST

ಬೆಳಗಾವಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಧಿಸಿದ ಹಿನ್ನೆಲೆ ನಗರದ ಮತದಾರರಿಗೆ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ವಿಡಿಯೋ ಸಂದೇಶದ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಮತದಾರರಿಗೆ ಕೃತಜ್ಞತೆ ಸಲ್ಲಿಸಿದ ಕಾರಜೋಳ

ಪ್ರಧಾನಿ ನರೇಂದ್ರ ಮೋದಿ, ಬಿಎಸ್‌ವೈ, ಸಿಎಂ ಬೊಮ್ಮಾಯಿ ಆಡಳಿತಕ್ಕೆ ಬೆಳಗಾವಿ ಜನ ಮೆಚ್ಚಿದ್ದಾರೆ. ಕೊರೊನಾ, ಪ್ರವಾಹದ ಹೊಡೆತದ ಮಧ್ಯೆಯೂ ಬಿಜೆಪಿ ಒಳ್ಳೆಯ ಆಡಳಿತ ನೀಡುತ್ತಿದೆ. ಬೆಳಗಾವಿ ಪಾಲಿಕೆ ಚುನಾವಣೆಗೆ ನಾನೇ ಉಸ್ತುವಾರಿ ಆಗಿದ್ದೆ. ಪಕ್ಷದ ಅಧ್ಯಕ್ಷರು ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇನೆ ಎನ್ನುವ ತೃಪ್ತಿ ನನಗಿದೆ ಎಂದಿದ್ದಾರೆ.

ಪಕ್ಷದ ನಾಯಕರ ಮಾರ್ಗದರ್ಶನದಲ್ಲಿ ನಾವು ಕೆಲಸ ಮಾಡಿದ್ದೇವೆ. ಬೆಳಗಾವಿ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಶಾಸಕರು, ಸಂಸದರು, ಕಾರ್ಯಕರ್ತರು ಶ್ರಮಿಸಿದ್ದಾರೆ. ನಮ್ಮ ಉತ್ತಮ ಆಡಳಿತಕ್ಕೆ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶವೇ ಸಾಕ್ಷಿ ಎಂದರು.

ಪಾಲಿಕೆ ಚುನಾವಣೆಯಲ್ಲಿ 31 ಬಿಜೆಪಿ, 8 ಕಾಂಗ್ರೆಸ್​, ಎಂಇಎಸ್​- 2 ಇತರರು 7 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ : ಬೆಳಗಾವಿಯಲ್ಲಿ MES ಗೆ ತೀವ್ರ ಮುಖಭಂಗ.. ಬಿಜೆಪಿಗೆ ತೆಕ್ಕೆಗೆ ಕುಂದಾನಗರಿ

Last Updated : Sep 6, 2021, 12:34 PM IST

ABOUT THE AUTHOR

...view details