ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಲಾಕ್​ಡೌನ್​ ವಿಸ್ತರಣೆಗೆ ಸಚಿವ ಕಾರಜೋಳ ಮನವಿ - Minister Govinda Karajala appeal to cm for lockdown extension

ಬೆಳಗಾವಿಯಲ್ಲಿ ಒಟ್ಟಾರೆ 135 ತಂಡಗಳನ್ನು ರಚಿಸಿಕೊಂಡು ಇದುವರೆಗೆ 1300 ಕ್ಕೂ ಗ್ರಾಮಗಳಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ (ರ್ಯಾಟ್) ಮಾಡಲಾಗಿದ್ದು, ಇತರೆ ಪರೀಕ್ಷೆ ಸೇರಿದಂತೆ ಒಟ್ಟಾರೆ ಪಾಸಿಟಿವಿಟಿ ದರ ಶೇ 8.9 ರಷ್ಟಿದೆ. ಗಡಿ ಭಾಗದ ದೊಡ್ಡ ಜಿಲ್ಲೆಯಾಗಿರುವುದರಿಂದ ಪಾಸಿಟಿವಿಟಿ ದರ ನಿಯಂತ್ರಣಕ್ಕೆ ಇನ್ನೂ ಒಂದು ವಾರ ಲಾಕ್​ಡೌನ್​ ಮಾಡಿದರೆ ಮಾತ್ರ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

minister-govinda-karajala-appeal-for-a-one-week-lockdown-extension
ಎಂಟು ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ನಡೆದ ವಿಡಿಯೋ ಸಂವಾದ

By

Published : Jun 10, 2021, 2:10 PM IST

ಬೆಳಗಾವಿ: ಜಿಲ್ಲೆಯು ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯಗಳ ಗಡಿಗೆ ಹೊಂದಿಕೊಂಡಿದೆ. ಪಾಸಿಟಿವಿಟಿ ದರ ಶೇ 9ರ ಆಸುಪಾಸಿನಲ್ಲಿ ಇರುವುದರಿಂದ ಕೆಲವು ಆರ್ಥಿಕ ಚಟುವಟಿಕೆಗಳಿಗೆ ಅನುಮತಿಯೊಂದಿಗೆ ಲಾಕ್​ಡೌನ್​ ಇನ್ನೊಂದು ವಾರ ಕಾಲ ವಿಸ್ತರಿಸಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿಕೊಂಡಿದ್ದಾರೆ.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಬೆಳಗಾವಿಯೂ ಸೇರಿದಂತೆ ಎಂಟು ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ಆಟೋಮೊಬೈಲ್, ಕಟ್ಟಡ ನಿರ್ಮಾಣದಂತಹ ಪ್ರಮುಖ ಚಟುವಟಿಕೆಗಳಿಗೆ ಅವಕಾಶ ನೀಡುವ ಮೂಲಕ ಇನ್ನೊಂದು ವಾರ ಲಾಕ್​ಡೌನ್​ ಮುಂದುವರಿಸಬೇಕು ಎಂದರು.

ಲಾಕ್​ಡೌನ್​ ಮಾಡಿದರೆ ಮಾತ್ರ ಅನುಕೂಲ: ಜಿಲ್ಲೆಯಲ್ಲಿ ಮುಂಗಾರು ಕೃಷಿ ಚಟುವಟಿಕೆ ಚುರುಕಿನಿಂದ ನಡೆದಿದೆ. ಜಿಲ್ಲಾ ಮಟ್ಟದಲ್ಲಿ ರೇಷನ್ ಮತ್ತಿತರ ವ್ಯವಸ್ಥೆ ಮಾಡಲಾಗಿದೆ. ಸಂಭವನೀಯ 3ನೇ ಅಲೆಯ ನಿರ್ವಹಣೆಗೆ ಮಕ್ಕಳ ಆಸ್ಪತ್ರೆಯನ್ನು ಕೂಡ ಸಜ್ಜುಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಒಟ್ಟಾರೆ 135 ತಂಡಗಳನ್ನು ರಚಿಸಿಕೊಂಡು ಇದುವರೆಗೆ 1300 ಕ್ಕೂ ಗ್ರಾಮಗಳಲ್ಲಿ ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್ (ರ್ಯಾಟ್) ಮಾಡಲಾಗಿದ್ದು, ಇತರೆ ಪರೀಕ್ಷೆ ಸೇರಿದಂತೆ ಒಟ್ಟಾರೆ ಪಾಸಿಟಿವಿಟಿ ದರ ಶೇ 8.9 ರಷ್ಟಿದೆ. ಬೆಳಗಾವಿ ಗಡಿ ಭಾಗದ ದೊಡ್ಡ ಜಿಲ್ಲೆಯಾಗಿರುವುದರಿಂದ ಪಾಸಿಟಿವಿಟಿ ದರ ನಿಯಂತ್ರಣಕ್ಕೆ ಇನ್ನೂ ಒಂದು ವಾರ ಲಾಕ್​ಡೌನ್​ ಮಾಡಿದರೆ ಮಾತ್ರ ಅನುಕೂಲವಾಗಲಿದೆ. ಆದ್ದರಿಂದ ಲಾಕ್​​ಡೌನ್ ಮುಂದುವರಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರು.

ಕಾಲಾವಕಾಶ ಸಿಕ್ಕರೆ ಪಾಸಿಟಿವಿಟಿ ದರ ಕಡಿಮೆಗೊಳಿಸಲು ಸಾಧ್ಯ: ತಾಲೂಕುಗಳಲ್ಲಿ ಶೇ 10 ಹಾಗೂ ಅದಕ್ಕಿಂತಲೂ ಹೆಚ್ಚು ಪಾಸಿಟಿವಿಟಿ ದರ ಇದ್ದು, ಇನ್ನೊಂದು ವಾರ ಅವಕಾಶ ಸಿಕ್ಕರೆ ಪಾಸಿಟಿವಿಟಿ ದರ ಶೇ 5 ಕ್ಕಿಂತ ಕಡಿಮೆಗೊಳಿಸಲು ಅನುಕೂಲವಾಗಲಿದೆ. ರ್ಯಾಟ್ ನಲ್ಲಿ ಪಾಸಿಟಿವಿಟಿ ದರ ಶೇ 4 ಕ್ಕಿಂತ ಕಡಿಮೆಯಿದೆ. ಆದರೆ ಆರ್​ಟಿಪಿಸಿಆರ್​ ಪರೀಕ್ಷೆಯಲ್ಲಿ ಪಾಸಿಟಿವಿಟಿ ದರ ಹೆಚ್ಚಾಗಿ ಕಂಡುಬಂದಿದೆ. ಇನ್ನೊಂದು ವಾರ ಕಾಲಾವಕಾಶ ಸಿಕ್ಕರೆ ಪಾಸಿಟಿವಿಟಿ ದರ ಕಡಿಮೆಗೊಳಿಸಲು ಸಾಧ್ಯವಾಗಲಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಓದಿ:ನನ್ನ ಮೇಲೆ ಆರೋಪ ಸಾಬೀತಾಗದಿದ್ದರೆ ಸಿಂಧೂರಿ ರಾಜೀನಾಮೆ ಕೊಡ್ತಾರಾ?: ಸಾ‌.ರಾ ಮಹೇಶ್

ABOUT THE AUTHOR

...view details