ಕರ್ನಾಟಕ

karnataka

ETV Bharat / state

ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ: ಸಚಿವ ಶೆಟ್ಟರ್ - Minister Jagadish Shettar onm DKS and Siddaramaiah

ಕಾಂಗ್ರೆಸ್ ರಾಷ್ಟ್ರೀಯ ಪಕ್ಷ. ಮಾನವೀಯತೆ ಇರಬೇಕು. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಚಿಲ್ಲರೆ ರಾಜಕಾರಣ ಮಾಡಬಾರದು. ಸಿಡಿ ಪ್ರಕರಣ ವಿಚಾರಣೆ ಹಂತದಲ್ಲಿದೆ. ಯಾರದ್ದು ತಪ್ಪು, ಯಾರದ್ದು ಸರಿ ಎನ್ನುವುದು ತನಿಖೆಯಿಂದ ಸತ್ಯ ಹೊರ ಬರುತ್ತದೆ ಎಂದು ಶೆಟ್ಟರ್ ಹೇಳಿದರು.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ

By

Published : Apr 5, 2021, 12:54 PM IST

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಚುನಾವಣೆ ಎದುರಿಸಿ ಗೆಲ್ಲುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ವೈಯಕ್ತಿಕ ವಿಷಯ ಕೆದಕಿ ಚಾರಿತ್ರ್ಯವಧೆ ಮಾಡುವುದನ್ನು ಬಿಡಬೇಕೆಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹರಿಹಾಯ್ದರು.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿಕೆ

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ಎದುರಿಸಿ ಗೆಲ್ಲುವ ಕೆಲಸ ಮಾಡಬೇಕು.ಅದನ್ನು ಬಿಟ್ಟು ವೈಯಕ್ತಿಕ ವಿಷಯಗಳನ್ನು ಕೆದಕಿ ಚಾರಿತ್ರ್ಯವಧೆ ಮಾಡುವ ಕೆಲಸವನ್ನು ಕೈಬಿಡಬೇಕು. ಸಿಡಿ ಪ್ರಕರಣವನ್ನು ಎಸ್ಐಟಿ ತನಿಖೆ ನಡೀತಿದೆ. ವೈಯುಕ್ತಿಕವಾಗಿ ಇಷ್ಟು ಟಾರ್ಗೆಟ್ ಮಾಡಿದ್ರೆ ನಿಮ್ಮ ಬಗ್ಗೆಯೂ ವಿಚಾರ ಮಾಡಬೇಕಾಗುತ್ತದೆ. ವೈಯಕ್ತಿಕ ವಿಷಯ ತಗೆದುಕೊಂಡು ರಾಜಕಾರಣ ಮಾಡೋದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಎಸ್ಐಟಿ ಮೇಲೆ ನಂಬಿಕೆ ಇಲ್ಲ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ, ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಹೆಚ್.ವೈ.ಮೇಟಿಗೆ ಕ್ಲೀನ್ ಚಿಟ್ ಕೊಡಿಸಿದ್ದರಲ್ಲ. ಸಿಡಿ ಪ್ರಕರಣದಲ್ಲಿರುವಎಸ್‌ಐಟಿ ತಂಡದಲ್ಲಿ ಒಳ್ಳೆಯ ಅಧಿಕಾರಿಗಳಿದ್ದಾರೆ. ನಮ್ಮ ಸರ್ಕಾರದಲ್ಲಿ ಪಾರದರ್ಶಕವಾಗಿ ಸಮಗ್ರ ತನಿಖೆ ನಡೆಸಲಾಗುತ್ತಿದೆ. ಕಾಂಗ್ರೆಸ್ ನಾಯಕರು‌ ತಾಳ್ಮೆಯಿಂದ ಕಾಯಬೇಕಷ್ಟೇ ಎಂದರು.

ಇದನ್ನೂ ಓದಿ:ಬೆಂಗಳೂರು ಸ್ಫೋಟ ಪ್ರಕರಣ: ಆರೋಪಿಯ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ

ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ನಿರಂತರವಾಗಿ ಫೋನ್ ಮೂಲಕ‌ ಸಂಪರ್ಕದಲ್ಲಿದ್ದೇನೆ.ಅವರು ಕೂಡ ತಮ್ಮ ಬೆಂಬಲಿಗರಿಗೆ ಸೂಚನೆ ನೀಡಿದ್ದು, ಅವರು ಕೂಡ ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ.ಎಸ್ಐಟಿ ಪ್ರಕರಣ ಹಿನ್ನೆಲೆ ಬಾಲಚಂದ್ರ ಹಾಗೂ ರಮೇಶ ಜಾರಕಿಹೊಳಿ‌ ನಮಗೆ ಲಭ್ಯತೆ ಇಲ್ಲ ಎಂದು ಹೇಳಿದರು.

ABOUT THE AUTHOR

...view details