ಬೆಳಗಾವಿ: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಚುನಾವಣೆ ಘೋಷಣೆಯಿಂದಾಗಿ ನೀತಿ ಸಂಹಿತೆ ಜಾರಿಯಾಗಿರುವ ಕಾರಣ ಪೂರ್ವನಿಗದಿಯಾಗಿದ್ದ ಜಲಸಂಪನ್ಮೂಲ ಇಲಾಖೆ ಸಭೆಯನ್ನು ಸಚಿವ ರಮೇಶ್ ಜಾರಕಿಹೊಳಿ ಮುಂದೂಡಿದ್ದಾರೆ.
ಗ್ರಾಪಂ ಚುನಾವಣೆ ನೀತಿ ಸಂಹಿತೆ ಜಾರಿ : ಇಲಾಖೆ ಸಭೆ ಮುಂದೂಡಿದ ಸಚಿವ ಜಾರಕಿಹೊಳಿ - Ramesh jarakiholi
ಕೋವಿಡ್ ನಿಯಂತ್ರಣ ಸಂಬಂಧ ಮಾತ್ರ ಚರ್ಚಿಸಲಾಗಿದೆ. ಜಿಲ್ಲೆಯಲ್ಲಿ ಸೋಂಕು ನಿಯಂತ್ರಣದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮಾಹಿತಿ..
ಇಲಾಖೆ ಸಭೆ ಮುಂದೂಡಿದ ಸಚಿವ ಜಾರಕಿಹೊಳಿ
ಡಿಸಿ ಕಚೇರಿ ಸಭಾಂಗಣದಲ್ಲಿ ನೀರಾವರಿ ಯೋಜನೆಗಳಿಗೆ ಅರಣ್ಯ ಇಲಾಖೆ ತಿರುವಳಿ ಪಡೆಯುವ ಬಗ್ಗೆ ಚರ್ಚಿಸಲು ಸಭೆ ಕರೆಯಲಾಗಿತ್ತು. ಕಳಸಾ ಬಂಡೂರಿ ನಾಲಾ, ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆ ಸಂಬಂಧ ಚರ್ಚಿಸಲು ಉನ್ನತ ಮಟ್ಟದ ಸಭೆ ಪೂರ್ವ ನಿಗದಿಯಾಗಿತ್ತು.
ಆದರೆ, ಗ್ರಾಪಂ ಚುನಾವಣೆ ಘೋಷಣೆಯಿಂದ ನೀತಿ ಸಂಹಿತೆ ಜಾರಿಯಾಗಿದೆ. ಹೀಗಾಗಿ, ಪೂರ್ವನಿಗದಿಯಾಗಿದ್ದ ಸಭೆ ಮುಂದೂಡಲಾಗಿದೆ. ಕೋವಿಡ್ ನಿಯಂತ್ರಣ ಸಂಬಂಧ ಮಾತ್ರ ಚರ್ಚಿಸಲಾಗಿದ್ದು, ಜಿಲ್ಲೆಯಲ್ಲಿ ಸೋಂಕು ನಿಯಂತ್ರಣದಲ್ಲಿದೆ ಎಂದು ಸಚಿವ ರಮೇಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ.