ಬೆಳಗಾವಿ: ಕನ್ನಡ ಭಾಷೆ ನಮಗೆ ತಾಯಿ ಸಮಾನ. ಸೂರ್ಯ-ಚಂದ್ರ ಇರುವವರೆಗೂ ಈ ಭಾಷೆ ಇರುತ್ತದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು. ಹಿಂದಿ ಭಾಷೆ ಹೇರಿಕೆ ಜಟಾಪಟಿ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸುತ್ತಾ, ಯಾರ ಜಟಾಪಟಿನೂ ಅಗತ್ಯ ಇಲ್ಲ. ದೇಶದಲ್ಲಿ ಆಯಾ ಪ್ರದೇಶ, ರಾಜ್ಯಗಳಲ್ಲಿ ಮಾತೃಭಾಷೆ ಇದೆ. ಅದೇ ರೀತಿ ಕರ್ನಾಟಕದಲ್ಲಿ ಕನ್ನಡ ಮಾತೃಭಾಷೆ ಎಂದರು.
ಬ್ರಿಟಿಷರು, ಮುಸ್ಲಿಮರು, ಪೋರ್ಚುಗೀಸರು ಸೇರಿ ದೇಶವನ್ನು 600 ವರ್ಷಗಳ ಕಾಲ ಪರಕೀಯರು ಆಳಿದ್ದಾರೆ. ಆದರೂ ಸಹ ಕನ್ನಡ ಭಾಷೆ ನಶಿಸಿ ಹೋಗಿಲ್ಲ, ಹಿಂದೂ ಧರ್ಮ ನಶಿಸಿ ಹೋಗಿಲ್ಲ. ಹಿಂದೂ ಧರ್ಮ ಮತ್ತು ಮಾತೃ ಭಾಷೆ ಶಾಶ್ವತವಾಗಿ ಇರುತ್ತದೆ ಎಂದು ಹೇಳಿದರು.