ಕರ್ನಾಟಕ

karnataka

ETV Bharat / state

ಮೊಬೈಲ್‌ ಫೀವರ್‌ ಕ್ಲಿನಿಕ್‌ ಬಸ್​ ಸಂಚಾರಕ್ಕೆ ಡಿಸಿಎಂ ಲಕ್ಷ್ಮಣ ಸವದಿ ಚಾಲನೆ.. - ಕೋವಿಡ್‌-19 ಮೊಬೈಲ್‌ ಫೀವರ್‌ ಕ್ಲಿನಿಕ್

ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಕಳೆದ 26ರಂದು ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗುತ್ತಿದ್ದಂತೆ, ಜಿಲ್ಲಾಡಳಿತ ಎಚ್ಚೆತ್ತಿದೆ. ನಂದಗಾವ್, ಸವದಿ, ಖವಟ್ಟಗೊಪ್ಪ ಹಾಗೂ ಝುಂಜರವಾಡ ಈ ನಾಲ್ಕು ಗ್ರಾಮಗಳಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಮುಖಾಂತರ ಗ್ರಾಮಸ್ಥರ ಆರೋಗ್ಯ ತಪಾಸಣೆಗೆ ಮುಂದಾಗಿದೆ.

By

Published : May 31, 2020, 4:00 PM IST

ಅಥಣಿ :ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಸ್ವಕ್ಷೇತ್ರದಲ್ಲಿ ಕೋವಿಡ್-19 ಪ್ರಕರಣ ಪತ್ತೆಯಾಗ್ತಿದ್ದಂತೆಯೇ ಅಧಿಕಾರಿಗಳು ಎಚ್ಚೆತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಗ್ರಾಮಸ್ಥರ ಆರೋಗ್ಯ ತಪಾಸಣೆಗಾಗಿರುವ ಮೊಬೈಲ್ ಫೀವರ್ ಕ್ಲಿನಿಕ್ ಬಸ್​ ಸಂಚಾರಕ್ಕೆ ತಾಲೂಕು ಸಾರ್ವಜನಿಕ ಆಸ್ಪತ್ರೆ ಎದುರು ಡಿಸಿಎಂ ಲಕ್ಷ್ಮಣ ಸವದಿ ಶನಿವಾರ ಉದ್ಘಾಟಿಸಿದರು.

ಮೊಬೈಲ್‌ ಫೀವರ್‌ ಕ್ಲಿನಿಕ್ ಬಸ್​ ಸಂಚಾರಕ್ಕೆ ಚಾಲನೆ..

ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಕಳೆದ 26ರಂದು ಕೊರೊನಾ ಸೋಂಕಿತ ಪ್ರಕರಣಗಳು ದಾಖಲಾಗುತ್ತಿದ್ದಂತೆ, ಜಿಲ್ಲಾಡಳಿತ ಎಚ್ಚೆತ್ತಿದೆ. ನಂದಗಾವ್, ಸವದಿ, ಖವಟ್ಟಗೊಪ್ಪ ಹಾಗೂ ಝುಂಜರವಾಡ ಈ ನಾಲ್ಕು ಗ್ರಾಮಗಳಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಮುಖಾಂತರ ಗ್ರಾಮಸ್ಥರ ಆರೋಗ್ಯ ತಪಾಸಣೆಗೆ ಮುಂದಾಗಿದೆ.

ಈ ಕುರಿತು ಡಿಸಿಎಂ ಸವದಿ ಮಾತನಾಡಿ, ಇದರಲ್ಲಿ ವೈದ್ಯರ ತಂಡ ಕಾರ್ಯನಿರ್ವಹಿಸಲಿದೆ. ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಆರೋಗ್ಯ ತಪಾಸಣೆ ಮಾಡಲಾಗುತ್ತದೆ. ಗ್ರಾಮಸ್ಥರು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಡಿಸಿಎಂ ಸವದಿ ತಿಳಿಸಿದರು.

ABOUT THE AUTHOR

...view details