ಕರ್ನಾಟಕ

karnataka

ETV Bharat / state

ವಿಶೇಷಚೇತನ, ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರ ಸಮಸ್ಯೆ ಆಲಿಸಿದ ಲಕ್ಷ್ಮಿ ಹೆಬ್ಬಾಳ್ಕರ್

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ವಿಶೇಷಚೇತನರು, ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರ ಸಮಸ್ಯೆಗಳಿಗೆ ಕಿವಿಯಾದರು.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

By ETV Bharat Karnataka Team

Published : Dec 7, 2023, 9:35 PM IST

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ

ಬೆಳಗಾವಿ: ಕಳೆದ 15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ವಿಆರ್​ಡಬ್ಬ್ಯೂ, ಯುಆರ್​ಡಬ್ಬ್ಯೂ, ಎಂಆರ್​ಡಬ್ಲ್ಯೂಗಳ ಸೇವೆಯನ್ನು ಖಾಯಂಗೊಳಿಸುವುದೂ ಸೇರಿದಂತೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸುವರ್ಣ ಗಾರ್ಡನ್ ಬಳಿಯ ಟೆಂಟ್​ನಲ್ಲಿ ಇಂದು ಕರ್ನಾಟಕ ರಾಜ್ಯ ವಿಶೇಷಚೇತನರ ಹಾಗೂ ವಿವಿಧೋದ್ಧೇಶ ಮತ್ತು ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರ ರಾಜ್ಯ ಒಕ್ಕೂಟದಿಂದ ಪ್ರತಿಭಟನೆ ನಡೆಯಿತು.

ವಿಶೇಷಚೇತನರು ಹಾಗೂ ಹಿರಿಯ ನಾಗರಿಕರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು. ಕನಿಷ್ಠ ವೇತನ ಜಾರಿಗೊಳಿಸಬೇಕು. ಸೇವಾ ಭದ್ರತೆ ಕಲ್ಪಿಸಬೇಕು. ಸರ್ಕಾರದ ವಿವಿಧ ಹಂತದಲ್ಲಿ ಕಾರ್ಯಕರ್ತರ ಬೇಡಿಕೆಯ ಕಡತಗಳು ಬಾಕಿ ಇದ್ದು, ಅವುಗಳನ್ನು ಕೂಡಲೇ ಅನುಷ್ಠಾನಗೊಳಿಸಬೇಕೆಂದು ಅವರು ಆಗ್ರಹಿಸಿದರು.

ಒಕ್ಕೂಟದ ರಾಜ್ಯಾಧ್ಯಕ್ಷ ಕೆ.ಸುಬ್ರಮಣ್ಯಮ್ 'ಈಟಿವಿ ಭಾರತ' ಜೊತೆಗೆ ಮಾತನಾಡಿ, 2007ರಿಂದ ಕನಿಷ್ಠ ಗೌರವಧನ ತೆಗೆದುಕೊಂಡು ಕೆಲಸ ಮಾಡುತ್ತಿದ್ದೇವೆ. ಇಂದಿನ ಬೆಲೆ ಏರಿಕೆ ಕಾಲದಲ್ಲಿ ಜೀವನ ನಡೆಸುವುದು ಕಷ್ಟಕರವಾಗಿದೆ. ವಿಶೇಷಚೇತನರಿಗಾಗಿ, ವಿಶೇಷಚೇತನರಿಗೋಸ್ಕರ ಕೆಲಸ ಮಾಡುವ ನಾವು ಬಲಿಪಶುವಾಗಿದ್ದೇವೆ. ಸಾಮಾಜಿಕ ಮತ್ತು ಸೇವಾ ಭದ್ರತೆ ಇಲ್ಲದೇ ಪರದಾಡುತ್ತಿದ್ದೇವೆ. ಅನ್ನರಾಮಯ್ಯ ಎಂದು ಕರೆಸಿಕೊಳ್ಳುವ ಸಿದ್ದರಾಮಯ್ಯನವರು ನಮ್ಮ ಬೇಡಿಕೆ ಈಡೇರಿಸಿ, ಬಾಳಿಗೆ ಬೆಳಕಾಗಬೇಕು ಎಂದು ಒತ್ತಾಯಿಸಿದರು.

ರೋಜ್ ಮೇರಿ ಮಾತನಾಡಿ, ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಸರ್ಕಾರದ ಕೊಂಡಿಯಾಗಿ, ಯಾವುದೇ ಸೇವಾ ಭದ್ರತೆ ಸೌಲಭ್ಯಗಳಿಲ್ಲದೆ ಕರ್ತವ್ಯ ನಿರ್ವಹಿಸುತ್ತಿದ್ದೇವೆ‌‌. ನಮ್ಮ ಸೇವೆಯನ್ನು ಪರಿಗಣಿಸಿ ಮಾನವೀಯತೆಯ ಆಧಾರದ ಮೇಲೆ ಖಾಯಂಗೊಳಿಸುವಂತೆ ಕಳೆದ 14 ವರ್ಷಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಪ್ರತಿಭಟನಾಕಾರರ ಮನವಿ ಸ್ವೀಕರಿಸಿ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ, ಮುಂದಿನ ಬಜೆಟ್​ನಲ್ಲಿ ಇವರ ಬೇಡಿಕೆಗಳಿಗೆ ಖಂಡಿತವಾಗಿಯೂ ಪರಿಹಾರ ಕಲ್ಪಿಸುತ್ತೇವೆ. ರಾಜ್ಯದ ಮೂಲೆಮೂಲೆಗಳಿಂದ ಆಗಮಿಸಿರುವ ವಿಶೇಷಚೇತನರು, ಐದು ಗ್ಯಾರಂಟಿಗಳ ಪೈಕಿ ನಾಲ್ಕು ಗ್ಯಾರಂಟಿ‌ ಕೊಟ್ಟಿದ್ದೀರಿ. ತಮಗೆ ಭರವಸೆ ನೀಡಿದಂತೆ ನಮ್ಮ ಬೇಡಿಕೆಯನ್ನೂ ಈಡೇರಿಸುವಂತೆ ಕೇಳಿಕೊಂಡಿದ್ದಾರೆ. ಫೆಬ್ರವರಿಯಲ್ಲಿ ಆಯವ್ಯಯ ಸಭೆ ಶುರುವಾಗಿ ನಮ್ಮ ಇಲಾಖೆ ಬಂದಾಗ ಮೊದಲು ಇವರಿಗೆ ಆದ್ಯತೆ ನೀಡುತ್ತೇವೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಜೆ.ದೇವರಾಜ, ಎಸ್.ಕೃಷ್ಣಪ್ಪ, ಜಗನ್ನಾಥ ಗಾರೇ, ಶ್ರೀಮಂತ ಪಾಟೀಲ, ಮಾಳಪ್ಪ ಪೂಜಾರ, ಕರಿಬಸಜ್ಜ ರುದ್ರೇಗೌಡ, ಹರೀಶ್ ​ಕುಮಾರ್, ಮಹದೇವಪ್ಪ ಸೇರಿದಂತೆ ಸಾವಿರಾರು ಜನ ಭಾಗವಹಿಸಿದ್ದರು.

ಇದನ್ನೂ ಓದಿ:ವಿಧಾನಸಭೆಯಲ್ಲಿ ಬಿಜೆಪಿ ಕಾರ್ಯಕರ್ತನಿಗೆ ಚೂರಿ ಇರಿತ ಪ್ರಕರಣದ ಗದ್ದಲ: ಗೃಹ ಸಚಿವರ ಉತ್ತರಕ್ಕೆ ಬಿಜೆಪಿ ಆಕ್ಷೇಪ, ಸಭಾತ್ಯಾಗ

ABOUT THE AUTHOR

...view details