ಕರ್ನಾಟಕ

karnataka

ETV Bharat / state

ಆರ್ಥಿಕವಾಗಿ ಹಿಂದುಳಿದವರಿಗೆ ಉದ್ಯಮ ಸ್ಥಾಪಿಸಲು ಶೇ 75ರಷ್ಟು ಸಬ್ಸಿಡಿ: ಸಚಿವ ನಿರಾಣಿ - Vishweshwaraiah Technical University, Belgaum

ಆರ್ಥಿಕವಾಗಿ ಹಿಂದುಳಿದ ವರ್ಗದವರು ಉದ್ಯಮ ಸ್ಥಾಪಿಸಲು ಅನುವಾಗುವಂತೆ ಕೆಐಎಡಿಬಿಯಿಂದ ಕೈಗಾರಿಕಾ ನಿವೇಶನಕ್ಕೆ ಶೇಕಡಾ 75ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್‌.ನಿರಾಣಿ ತಿಳಿಸಿದರು.

Vishweshwaraiah Technical University, Belgaum
ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮ ಉದ್ಘಾಟನೆ

By

Published : Apr 8, 2022, 9:50 PM IST

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ (ಕೆಐಎಡಿಬಿ)ಯಿಂದ ಕೈಗಾರಿಕೆ ನಿವೇಶನಕ್ಕೆ ಶೇ. 75 ರಷ್ಟು ರಿಯಾಯಿತಿ ನೀಡಲಾಗುತ್ತದೆ. ಅದೇ ರೀತಿ ಆರ್ಥಿಕವಾಗಿ ಹಿಂದುಳಿದವರಿಗೂ ಶೇ.75ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್‌.ನಿರಾಣಿ ಹೇಳಿದರು.

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ 'ಉದ್ಯಮಿಯಾಗು ಉದ್ಯೋಗ ನೀಡು' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೆಳಗಾವಿ ಅಲ್ಲದೇ ರಾಜ್ಯದ ನಾನಾ ಭಾಗಗಳಿಂದ 11 ಸಾವಿರ ವಿದ್ಯಾರ್ಥಿಗಳು ವfಡಿಯೋ ಕಾನ್ಫರೆನ್ಸ್ ಮೂಲಕ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದು ಬಹಳ ಸಂತಸದ ವಿಚಾರ. ಕಾರ್ಯಕ್ರಮಕ್ಕೆ ನೋಂದಣಿ ಮಾಡಿಕೊಂಡಿರುವವರ ಪೈಕಿ ಉದ್ಯಮ ಸ್ಥಾಪಿಸುವ ಆಸಕ್ತಿ ತೋರುವವರಿಗೆ ಅವರ ಆಯ್ಕೆಯ ಕ್ಷೇತ್ರದಲ್ಲಿ ಒಂದು ವಾರದಿಂದ ಒಂದು ತಿಂಗಳವರೆಗೆ ವಿಶೇಷ ತರಬೇತಿ ನೀಡಲಾಗುತ್ತದೆ ಎಂದರು.

ಉದ್ಯಮಗಳ ಸ್ಥಾಪನೆಗೆ ಬೇಕಾದ ಅಗತ್ಯ ಮಾಹಿತಿಯನ್ನು ಈ ಕಾರ್ಯಕ್ರಮಲದಲ್ಲಿ ಪಡೆಯಬಹುದು. ತಜ್ಞರಿಂದ ಸಾಲ ಸೌಲಭ್ಯ, ಹಣ ತೊಡಗಿದುವ ತಂತ್ರಗಾರಿಕೆ ತಿಳಿಯಲು ಉತ್ತಮ ಕಾರ್ಯಕ್ರಮ. ಮುಂದಿನ ದಿನಗಳಲ್ಲಿ ಮೈಸೂರು, ಕರಾವಳಿ ಹಾಗೂ ಬೆಂಗಳೂರಿನ ಕಂದಾಯ ವಿಭಾಗ 2ರಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ:ಆದಿ ಜಾಂಬವ ಹರಿಜನ ವಿದ್ಯಾರ್ಥಿ ನಿಲಯದಲ್ಲಿ ಅಕ್ರಮ?: ಧ್ವನಿ ಎತ್ತಿದ ಕುಟುಂಬಕ್ಕೆ ಬಹಿಷ್ಕಾರ

ABOUT THE AUTHOR

...view details