ಬೆಳಗಾವಿ :ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮಾರ್ಕೆಟಿಂಗ್ ವುಮೆನ್ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ವ್ಯಂಗ್ಯವಾಡಿದ್ದಾರೆ.
ಗೋಕಾಕ್ ತಾಲೂಕಿನ ಜಮನಾಳ ಗ್ರಾಮದಲ್ಲಿ ರಮೇಶ್ ಜಾರಕಿಹೊಳಿ ಮಂತ್ರಿ ಮಾಡಿದ್ದು ನಾನೇ ಎಂಬ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ವಿಚಾರಕ್ಕೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಹಿತೈಷಿಗಳು ಆಕೆ ಬಗ್ಗೆ ಮಾತನಾಡದಂತೆ ನನಗೆ ವಾರ್ನಿಂಗ್ ಮಾಡಿದ್ದಾರೆ.
ಆಕೆ ಮಾರ್ಕೆಟಿಂಗ್ ವುಮೆನ್, ಏನೇ ಮಾಡಿದರೂ ಮಾರ್ಕೆಟಿಂಗ್ ಮಾಡಿಕೊಳ್ಳುತ್ತಾಳೆ. ಹೀಗಾಗಿ, ನನ್ನ ಹಿತೈಷಿಗಳು ಆಕೆ ಬಗ್ಗೆ ಮಾತನಾಡದಂತೆ ಬಹಳಷ್ಟು ಮನವಿ ಮಾಡಿದ್ದಾರೆ. ನನ್ನನ್ನು ಯಾರು ಮಂತ್ರಿ ಮಾಡಿದ್ದಾರೆ ಅಂತಾ ಮುಂದೆ ಹೇಳ್ತೇನೆ. ಸಿದ್ದರಾಮಯ್ಯರನ್ನ ಕೇಳಿ ನನ್ನ ಯಾರು ಮಂತ್ರಿ ಮಾಡಿದ್ದು ಅಂತಾ? ಎಂದು ಲಕ್ಷ್ಮಿ ಹೇಳಿಕೆಗೆ ತಿರುಗೇಟು ನೀಡಿದರು.