ಬೆಳಗಾವಿ:ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರ ಆಶೀರ್ವಾದದಿಂದಲೇ ನಾನು ಸಚಿವನಾದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ ನೀಡಿದ್ದಾರೆ.
ದೆಹಲಿಯಲ್ಲಿ ಫಡ್ನವಿಸ್ ಅವರ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಗೋಕಾಕ ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಫೆಬ್ರವರಿ 6ರಂದು ನಾನು ಮಂತ್ರಿಯಾದ ತಕ್ಷಣವೇ ಫಡ್ನವಿಸ್ ಅವರನ್ನು ಭೇಟಿಯಾಗಬೇಕಿತ್ತು. ಕೊರೊನಾ ಕಾರಣಕ್ಕೆ ನನ್ನ ಅವರ ಭೇಟಿ ಸಾಧ್ಯವಾಗಿರಲಿಲ್ಲ. ದೆಹಲಿಯಲ್ಲಿ ಭೇಟಿಯಾದಾಗ ಕೃತಜ್ಞತೆ ಸಲ್ಲಿಸಿದ್ದು, ಇದು ಸೌಜನ್ಯಯುತ ಭೇಟಿಯಷ್ಟೆ. ನಾನು ಸಚಿವನಾಗಲು ದೇವೇಂದ್ರ ಫಡ್ನವಿಸ್ ಅವರ ಪ್ರಮುಖ ಆಶೀರ್ವಾದವಿದೆ. ಹೀಗಾಗಿ ಧನ್ಯವಾದ ಹೇಳಲು ದೇವೇಂದ್ರ ಫಡ್ನವೀಸ್ ಭೇಟಿಯಾಗಿದ್ದೇನೆ ಎಂದರು.