ಕರ್ನಾಟಕ

karnataka

ETV Bharat / state

ಬಿಜೆಪಿಗೆ ಹೋಗಿದ್ದಕ್ಕೆ ಕೆಲ ಕಾಂಗ್ರೆಸ್‌ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದರು: ಸಚಿವ ರಮೇಶ್ ಜಾರಕಿಹೊಳಿ - Gokak News

ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್​ ಶಾ ಹಾಗೂ ಯಡಿಯೂರಪ್ಪನವರ ಗಟ್ಟಿತನ ನೋಡಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದಿದ್ದೇನೆ. ಬಿಜೆಪಿಗೆ ಹೋಗಿದ್ದಕ್ಕೆ ಕೆಲ ಕಾಂಗ್ರೆಸ್ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದರು.

Minister Ramesh Jarkiholi
ಸಚಿವ ರಮೇಶ್ ಜಾರಕಿಹೊಳಿ

By

Published : Jan 3, 2021, 8:00 PM IST

ಬೆಳಗಾವಿ: ಗೋಕಾಕ ಪಟ್ಟಣದಲ್ಲಿರುವ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿಯವರ ಗೃಹ ಕಚೇರಿಯ ಆವರಣದಲ್ಲಿ ನೂತನವಾಗಿ ಆಯ್ಕೆಯಾದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರಿಗೆ ಸತ್ಕಾರ ಕಾರ್ಯಕ್ರಮ ನಡೆಯಿತು.

ಗೋಕಾಕ್: 25 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಸಚಿವ ರಮೇಶ್ ಜಾರಕಿಹೊಳಿ

ಬಳಿಕ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಗೆದ್ದವರು, ಸೋತವರು ಎಲ್ಲರೂ ನಮ್ಮವರೇ. ನಿಮ್ಮ ಆಶೀರ್ವಾದದಿಂದಲೇ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ಸತತ ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿರುವ ನನಗೆ ಗೋಕಾಕ ಮತಕ್ಷೇತ್ರದ ಜನತೆ ಸಾಕಷ್ಟು ಸಹಕಾರ ನೀಡಿದ್ದೀರಿ ಎಂದರು.

ಕೆಲವರು ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್​ ಭರ್ಜರಿ ಗೆಲುವೆಂದು ಬೀಗುತ್ತಿದ್ದಾರೆ. ನಾನು ಮನಸ್ಸು ಮಾಡಿದರೆ 24 ತಾಸಿನಲ್ಲಿ ಕಾಂಗ್ರೆಸ್ಸಿನವರು ಬಿಜೆಪಿಗೆ ಬರುತ್ತಾರೆ. ಅದಲ್ಲದೇ ಬರುವ ಬೆಳಗಾವಿ ಲೊಕಸಭಾ ಉಪಚುನಾವಣೆಯಲ್ಲಿ ಅಂಗಡಿ ಕುಟುಂಬದವರಿಗೆ ಬಿಜೆಪಿ ಟಿಕೆಟ್ ನೀಡಿದರೆ ಒಳ್ಳೆಯದು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. ಆದರೂ ಹೈಕಮಾಂಡ್​ ನಿರ್ಣಯವೇ ಅಂತಿಮ ಎಂದರು.

ಇದಕ್ಕೂ‌ ಮುನ್ನ ಗೋಕಾಕ್ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ಕಾಮಗಾರಿಗಳು, ವಿದ್ಯುತ್ ಕಾಮಗಾರಿಗಳು, ಉದ್ಯಾನವನ ಅಭಿವೃದ್ಧಿ ಕಾಮಗಾರಿಗಳು, ನೀರು ಸರಬರಾಜು ಕಾಮಗಾರಿಗಳು ಸೇರಿದಂತೆ ಎಸ್.ಎಫ್.ಸಿ ವಿಶೇಷ ಅನುದಾನದಡಿ 25 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚಾಲನೆ ನೀಡಿದರು.

ABOUT THE AUTHOR

...view details