ಬೆಳಗಾವಿ:ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಬಯಸಿದರೆ ರಮೇಶ್ ಜಾರಕಿಹೊಳಿ ವಿರುದ್ಧ ನಾನೇ ಅಭ್ಯರ್ಥಿ ಆಗುವೆ ಎಂಬ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆಗೆ ಸಚಿವ ರಮೇಶ್ ಜಾರಕಿಹೊಳಿ ಟಾಂಗ್ ನೀಡಿದ್ದಾರೆ.
ನಗರದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೋಕಾಕಿಗೆ ಬರುವುದಾದರೆ ಮೋಸ್ಟ್ ವೆಲ್ಕಮ್, ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಹಕ್ಕಿದೆ. ಚುನಾವಣೆಗೆ ನಿಲ್ಲಲಿ ನೋಡೋಣ ಎಂದರು.
ಓದಿ: ನಾವು ರಾಜಕೀಯದಲ್ಲಿ ಮೀಸಲಾತಿ ಕೇಳುತ್ತಿಲ್ಲ; ಜಯಮೃತ್ಯುಂಜಯ ಸ್ವಾಮೀಜಿ
ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ, ಶಾಸಕ ಅಲ್ಲ. ಯಾವ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಇಲ್ಲವೋ ಅಲ್ಲಿ ಗೆಲ್ಲಿಸಬೇಕು. ನಾಲ್ಕೈದು ರಾಜ್ಯಗಳಲ್ಲಿ ಕಾಂಗ್ರೆಸ್ ಯಾಕೆ ಪತನವಾಗಿದೆ ಎಂಬುವುದನ್ನು ಶಾಸಕಿ ತನ್ನ ಗಾಡ್ ಫಾದರ್ಗೆ ಕೇಳಿದರೆ ಒಳ್ಳೆಯದು ಎನ್ನುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮರ್ ಹಾಗೂ ಶಾಸಕಿ ಹೆಬ್ಬಾಳ್ಕರ್ ಟಾಂಗ್ ಕೊಟ್ಟರು.
ಎಸ್ಟಿ ಮೀಸಲು ಹೆಚ್ಚಿಸುವ ಸಂಬಂಧ ಈಗಾಗಲೇ ಸಾಕಷ್ಟು ಸಲ ಮಾತನಾಡಿದ್ದೇನೆ. ಈ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಸಮಾಜದ ಸ್ವಾಮೀಜಿಗಳು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧನಿದ್ದೇನೆ ಎಂದರು.