ಬೆಳಗಾವಿ :ಬೆಳಗಾವಿಯ ಬೀಮ್ಸ್ ಆಸ್ಪತ್ರೆಯ ಅವ್ಯವಸ್ಥೆ ಹಾಗೂ ನ್ಯೂನ್ಯತೆ ಬಗ್ಗೆ ಮಾಧ್ಯಮಗಳಲ್ಲಿ ನಿರಂತರ ವರದಿ ಪ್ರಸಾರವಾಗುತ್ತಿರುವ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಎಚ್ಚೆತ್ತುಕೊಂಡಿದ್ದಾರೆ.ಇಂದು ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆ ನಡೆಸಿ ಅಸಮಾಧಾನ ಹೊರ ಹಾಕಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀಮ್ಸ್ ನ ಕೋವಿಡ್ ವಾರ್ಡ್ ನ ಪರಿಸ್ಥಿತಿ ಅವಲೋಕಿಸಲು ಪ್ರತಿ 3 ಗಂಟೆಗೊಮ್ಮೆ ಡಿಸಿ, ಸಿಇಒ ಹಾಗೂ ಎಸ್ಪಿ ಭೇಟಿ ನೀಡಬೇಕು ಎಂದು ಖಡಕ್ ಸೂಚನೆ ನೀಡಿದ್ದಾರೆ. ಕಳೆದ ಎರಡು ದಿನಗಳಿಂದ ಬೀಮ್ಸ್ ನ ಅವ್ಯವಸ್ಥೆ ಬಗ್ಗೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಅದಕ್ಕಾಗಿ ಅಧಿಕಾರಿಗಳ ಸಭೆ ಕರೆದು ಅವ್ಯವ್ಯಸ್ಥೆ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಇನ್ಮುಂದೆ ಇಲ್ಲಿನ ಸೋಂಕಿತರಿಗೆ ತೊಂದರೆಯಾಗುವುದಿಲ್ಲ ಎಂದರು.