ಬೆಳಗಾವಿ : ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಮೇಲೆ ಸುಮ್ಮನೆ ಗೂಬೆ ಕೂರಿಸುವುದು ಸರಿಯಲ್ಲ. ನಾವು ಎಲ್ಲಾ ಜಾತಿ, ಜನಾಂಗದ ಭಾಷಿಕರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಶಿವಾಜಿ ಮೂರ್ತಿ ವಿಚಾರದಲ್ಲಿ ಸರ್ಕಾರದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ: ಸಚಿವೆ ಶಶಿಕಲಾ ಜೊಲ್ಲೆ
ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಶಿವಸೇನೆಯ ಕ್ಯಾತೆ ಮತ್ತು ಕರ್ನಾಟಕ ಸರ್ಕಾರ ಕ್ಷಮೆ ಕೇಳಬೇಕೆಂಬ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವೀಟ್ಗೆ ಸಚಿವೆ ಶಶಿಕಲಾ ಜೊಲ್ಲೆ ತಿರುಗೇಟು ನೀಡಿದರು.
ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಶಿವಸೇನೆಯ ಕ್ಯಾತೆ ಮತ್ತು ಕರ್ನಾಟಕ ಸರ್ಕಾರ ತಕ್ಷಣವೇ ಬೇಷರತ್ ಕ್ಷಮೆ ಕೇಳುವುದರ ಜೊತೆಗೆ ಗೌರವಯುತವಾಗಿ ಮೂರ್ತಿ ಸ್ಥಾಪಿಸಬೇಕು ಎಂಬ ಖಾನಾಪುರ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಟ್ವೀಟ್ಗೆ ಅವರು ತಿರುಗೇಟು ನೀಡಿದರು. ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವುದು ತಪ್ಪು. ನಾವು ಎಲ್ಲಾ ಧರ್ಮ, ಜಾತಿ- ಜನಾಂಗ ಭಾಷೆಯವರನ್ನು ಒಟ್ಟಾಗಿ ಕರೆದುಕೊಂಡು ಹೋಗುತ್ತಿದ್ದೇವೆ. ಕಾನೂನು ಪ್ರಕಾರ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸದ್ಯ ತೆಗೆದಿಡಲಾಗಿದೆ. ಜಾಗ ನಿಗದಿಪಡಿಸಿದ ಬಳಿಕ ಪತ್ತೆ ಪ್ರತಿಷ್ಠಾಪಿಸಲಾಗುತ್ತದೆ ಎಂದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಹೊರಗಿನವರು ಈ ವಿಷಯವನ್ನು ವಿನಾಕಾರಣ ದೊಡ್ಡದು ಮಾಡುತ್ತಿದ್ದಾರೆ. ಗ್ರಾಮಸ್ಥರು ನಾವೇ ಮಾತಾಡಿಕೊಂಡು ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದಿದ್ದಾರೆ. ಹೀಗಾಗಿ ವಿನಾಕಾರಣ ವಿವಾದ ಎಳೆದು ತರುವುದು ಸರಿಯಲ್ಲ ಎಂದು ಹೇಳಿದರು.