ಬೆಳಗಾವಿ :ಜುಲೈ 2ರಂದು ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ರಾಜ್ಯ ರಾಜಕೀಯ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ಕಾರ್ಯಕ್ರಮ ಆಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಡಿಕೆಶಿ ಪದಗ್ರಹಣ ರಾಜ್ಯ ರಾಜಕೀಯದಲ್ಲೇ ಐತಿಹಾಸಿಕವಾಗಲಿದೆ.. ಸತೀಶ್ ಜಾರಕಿಹೊಳಿ
ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ಕಡೆ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮ ವೀಕ್ಷಣೆ ಸಿದ್ಧತೆ ಸಂಬಂಧ ಮೂವರೂ ಕೆಪಿಸಿಸಿ ಕಾರ್ಯಾಧ್ಯಕ್ಷರು ರಾಜ್ಯದಾದ್ಯಂತ ಪ್ರವಾಸ ನಡೆಸಿ ಪರಿಶೀಲನೆ ನಡೆಸಿದ್ದಾರೆ..
ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿಂದು ಮಾತನಾಡಿದ ಅವರು, ಡಿಕೆಶಿ ಪದಗ್ರಹಣ ಕಾರ್ಯಗಳನ್ನು ಲೈವ್ ಮೂಲಕ 10 ಲಕ್ಷ ಜನ ವೀಕ್ಷಿಸಲಿದ್ದಾರೆ. ಪಕ್ಷ ಸಂಘಟನೆಯ ದೃಷ್ಟಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ಕಡೆ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಕಾರ್ಯಕ್ರಮ ವೀಕ್ಷಣೆ ಸಿದ್ಧತೆ ಸಂಬಂಧ ಮೂವರೂ ಕೆಪಿಸಿಸಿ ಕಾರ್ಯಾಧ್ಯಕ್ಷರು ರಾಜ್ಯದಾದ್ಯಂತ ಪ್ರವಾಸ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ ಎಪಿಎಂಸಿ ಚುನಾವಣೆ ಇದ್ದ ಕಾರಣ ಕೆಪಿಸಿಸಿ ನೂತನ ಕಚೇರಿ ಪೂಜಾ ಕಾರ್ಯಕ್ರಮಕ್ಕೆ ಹೋಗಲಾಗಲಿಲ್ಲ. ಬೆಂಗಳೂರಿನಲ್ಲಿ ಇದ್ದಿದ್ರೆ ಕೆಲ ನಿಮಿಷಗಳ ಕಾಲ ಆದರೂ ಕಾರ್ಯಕ್ರಮಕ್ಕೆ ಹೋಗಿ ಬರುತ್ತಿದ್ದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಅವಶ್ಯಕತೆ ಇಲ್ಲ. ಈಗಾಗಲೇ ಮೂರು ತಿಂಗಳ ಲಾಕ್‌ಡೌನ್ ಮಾಡಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಜನ ಜಾಗೃತಿಯೊಂದೇ ಉತ್ತಮ ಮಾರ್ಗ ಎಂದರು.