ಚಿಕ್ಕೋಡಿ :ದೇಶದಲ್ಲಿ ಮೊದಲ ಬಾರಿಗೆ ಕೃಷಿ ಸಚಿವರೇ ರೈತರ ಜತೆ ಕಳೆಯುವ ಮೂಲಕ ದಿಟ್ಟ ಹೆಜ್ಜೆ ಇಟ್ಟಿದ್ದಾರೆ ಎಂದು ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರೈತರು ಅಧಿಕಾರಿಗಳ ಕಡೆಗೆ ಹೋಗುವುದನ್ನ ತಪ್ಪಿಸುವ ಉದ್ದೇಶದಿಂದ ರೈತರೊಂದಿಗೊಂದು ದಿನ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದರ ಜೊತೆಗೆ ರೈತರಿಗೆ ಸಂಬಂಧಿಸಿದ ಯೋಜನೆಗಳನ್ನು ತಲುಪಿಸಲು ಸ್ವತಃ ಮಂತ್ರಿಗಳೇ ಕ್ಷೇತ್ರಕ್ಕೆ ಬಂದಿದ್ದಾರೆ.
ಚಿಕ್ಕೋಡಿಯಲ್ಲಿ ಶಶಿಕಲಾ ಜೊಲ್ಲೆ ಹೇಳಿಕೆ ರೈತರೊಂದಿಗೆ, ರೈತ ಕುಟುಂಬದವರೊಂದಿಗೆ ಸಂವಾದ ನಡೆಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಜನರ ಮನೆಗೆ ಮುಟ್ಟಿಸುವ ಕೆಲಸ ಮಾಡಲಾಗುತ್ತಿದೆ ಎಂದರು. ರೈತರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಅವುಗಳ ಪರಿಹಾರದ ನಿಟ್ಟಿನಲ್ಲಿ "ರೈತರೊಂದಿಗೊಂದು ದಿನ" ಕಳೆಯುವುತ್ತಿರುವುದು ಅರ್ಥಪೂರ್ಣವಾಗಿದೆ. ಸ್ವತಃ ಕೃಷಿ ಸಚಿವರೇ ರೈತರ ಮನೆಯಂಗಳಕೆ ಬಂದು ಅವರೊಂದಿಗೆ ಮುಕ್ತ ಸಂವಾದ ನಡೆಸುವ ಮೂಲಕ ಕೃಷಿಕರ ಸಮಸ್ಯೆ ನಿವಾರಣೆಗೆ ಅನುಕೂಲವಾಗಲಿದೆ.
ನಿಪ್ಪಾಣಿ ಕ್ಷೇತ್ರ ಐದಾರು ವರ್ಷಗಳಿಂದ ಪ್ರವಾಹಕ್ಕೆ ತುತ್ತಾದ ಪರಿಣಾಮ ರೈತರು ಕಷ್ಟದಲ್ಲಿದ್ದಾರೆ. ಗಡಿಭಾಗ ಆಗಿರುವುದರಿಂದ ಇಲ್ಲಿನ ರೈತರಿಗೆ ಹೆಚ್ಚಿನ ನೆರವು ಅಗತ್ಯವಿದೆ. ಗಡಿಭಾಗ ಆಗಿರುವ ನಿಪ್ಪಾಣಿ ಭಾಗದಲ್ಲಿ ಕೃಷಿ ಪದವಿ ಕಾಲೇಜು ಸ್ಥಾಪಿಸುವ ಅಗತ್ಯವಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಪ್ರತಿಪಾದಿಸಿದರು.