ಕರ್ನಾಟಕ

karnataka

ETV Bharat / state

ಪ್ರವಾಹ ಸಂತ್ರಸ್ತರಿಗೆ ಧೈರ್ಯ ತುಂಬಿದ  ನೂತನ ಸಚಿವೆ ಶಶಿಕಲಾ ಜೊಲ್ಲೆ - kannada news

ನಿರಾಶ್ರಿತರಿಗೆ ಸರಕಾರದ ವತಿಯಿಂದ ಸೂಕ್ತ ಪರಿಹಾರ ದೊರೆಯುತ್ತವೆ. ಯಾರೂ ಭಯಪಡುವ ಅವಶ್ಯಕತೆ ಇಲ್ಲ ಎಂದು ಸಚಿವೆ ಶಶಿಕಲಾ ಜೊಲ್ಲೆ ಚಿಕ್ಕೋಡಿಯಲ್ಲಿ ಜನರಿಗೆ ಧೈರ್ಯ ತುಂಬಿ ಸಾಂತ್ವಾನ ಹೇಳಿದರು.

ಸಚಿವೆ ಶಶಿಕಲಾ ಜೊಲ್ಲೆ

By

Published : Aug 22, 2019, 4:41 PM IST

ಚಿಕ್ಕೋಡಿ: ಯಾವ ಸಂತ್ರಸ್ತರೂ ಹೆದರುವ ಅವಶ್ಯಕತೆ ಇಲ್ಲ. ನಿಮ್ಮ ಜೊತೆ ಎಲ್ಲ ವಿಭಾಗದ ಅಧಿಕಾರಿಗಳು ಇದ್ದಾರೆ ಎಂದು ನಿರಾಶ್ರಿತರಿಗೆ ನೂತನ ಸಚಿವೆ ಶಶಿಕಲಾ ಜೊಲ್ಲೆ ಆತ್ಮವಿಶ್ವಾಸ ನೀಡಿದರು.

ಪ್ರವಾಹ ಸಂತ್ರಸ್ತರಿಗೆ ಅಭಯವನ್ನು ನೀಡುತ್ತಿರುವ ಸಚಿವೆ ಶಶಿಕಲಾ ಜೊಲ್ಲೆ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿ ಮಾತನಾಡಿದ ಅವರು ಪ್ರವಾಹ ಸಂತ್ರಸ್ತರಲ್ಲಿ ಧೈರ್ಯ ತುಂಬಿದರು. ಹಾನಿಯಾದ ಪ್ರದೇಶದ ಬಗ್ಗೆ ಕೂಡಲೆ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗಾಗಲೇ ನಿಮ್ಮ ಮನೆಯ ಸಾಮಗ್ರಿಗಳು ಎಲ್ಲವೂ ಪ್ರವಾಹಕ್ಕೆ ಕೊಚ್ಚಿ ಹೋಗಿವೆ. ಇಂತಹ ಪರಿಸ್ಥಿತಿಯಲ್ಲಿ 3,800 ರೂ.ಗಳನ್ನು ನೀಡಲು ಸರಕಾರ ನಿಗಧಿ ಮಾಡಿತ್ತು. ಆದರೆ, ಈಗ ಪಿಡಿಓ, ನೋಡಲ್​ ಅಧಿಕಾರಿಗಳ ನೇತೃತ್ವದಲ್ಲಿ ಹಾನಿಗೊಳಗಾದ ಕುಟುಂಬಕ್ಕೆ 10,000 ರೂ ನಿಗಧಿ ಮಾಡಲಾಗಿದೆ ಎಂದು ಹೇಳಿದರು. ಇನ್ನು ಪ್ರವಾಹ ಪರಿಸ್ಥಿತಿ ಬಗ್ಗೆ ಸರ್ಕಾರ ಕಟಿಬದ್ದವಾಗಿದ್ದು. ಸೂಕ್ತ ಪರಿಹಾರ ನೀಡಲಿದೆ ಎಂದು ಭರವಸೆ ನೀಡಿದರು.

ABOUT THE AUTHOR

...view details