ಬೆಳಗಾವಿ: ರಾಜ್ಯದಲ್ಲಿ ಬಿಜೆಪಿ ಸರಕಾರ ರಚನೆಯಾದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರವಾಹ, ಕೋವಿಡ್-19 ಸಂದರ್ಭದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಹೀಗಾಗಿ ರಾಜೀನಾಮೆ ನೀಡುವ ಮಾತುಗಳ ಬಗ್ಗೆ ನಾನು ಏನೂ ಹೇಳಲು ಇಚ್ಛಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಸಿಎಂ ಬದಲಾವಣೆ ಕೇವಲ ಊಹಾಪೋಹವಷ್ಟೇ: ಸಚಿವೆ ಶಶಿಕಲಾ ಜೊಲ್ಲೆ - ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ
ಸಿಎಂ ಹೇಳಿಕೆ ವಿಚಾರದ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ. ಸಿಎಂ ರಾಜ್ಯದಲ್ಲಿ ಒಳ್ಳೆಯ ಕಾರ್ಯವನ್ನು ಮಾಡ್ತಿದ್ದಾರೆ. ಊಹಾಪೋಹಗಳು ಬರ್ತಿವೆ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಾಗಿದ್ದೇವೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರವಾಹ ಮತ್ತು ಕೋವಿಡ್‌ನಂತಹ ಸಂದರ್ಭದಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಿದ್ದಾರೆ. ಪ್ರವಾಹ ಬಂದಾಗ ಸಿಎಂ ಎಲ್ಲೆಡೆ ಭೇಟಿ ನೀಡಿ ಸಂತ್ರಸ್ತರಿಗೆ ನ್ಯಾಯ ಒದಗಿಸಿದ್ದಾರೆ ಎಂದರು.
ಇದಲ್ಲದೇ ಕೋವಿಡ್‌ನಲ್ಲೂ ಒಳ್ಳೆಯ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಸಿಎಂ ಹೇಳಿಕೆ ವಿಚಾರದ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲಾ ಬದ್ಧರಾಗಿದ್ದೇವೆ. ಸಿಎಂ ಬದಲಾವಣೆ ವಿಚಾರ ಕೇವಲ ಊಹಾಪೋಹ ಎಂದರು.
Last Updated : Jun 7, 2021, 1:11 PM IST