ಕರ್ನಾಟಕ

karnataka

ETV Bharat / state

ರಾಜ್ಯದ 250ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಗೋಶಾಲೆ ಸ್ಥಾಪನೆಗೆ ಚಿಂತನೆ: ಸಚಿವೆ ಶಶಿಕಲಾ ಜೊಲ್ಲೆ - Establishment of Goshala in more than 250 temples

250ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಮುಂಬರುವ ದಿನಗಳಲ್ಲಿ ಗೋಶಾಲೆ ಸ್ಥಾಪಿಸಲಾಗುವುದು. ಜಿಲ್ಲಾವಾರು ಎ ಮತ್ತು ಬಿ ಗ್ರೇಡ್ ದೇವಸ್ಥಾನಗಳ ಪಟ್ಟಿ ಪಡೆದುಕೊಂಡು ಯೋಜನೆ ರೂಪಿಸಲಾಗುವುದು ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

Minister shashikala jolle did go pooja
ಸಚಿವೆ ಶಶಿಕಲಾ ಜೊಲ್ಲೆ ಗೋಪೂಜೆ ಮಾಡಿದರು

By

Published : Nov 5, 2021, 10:24 PM IST

ಬೆಳಗಾವಿ: ಮುಜರಾಯಿ ಇಲಾಖೆಯ 'ಎ' ಮತ್ತು 'ಬಿ' ಗ್ರೇಡ್ ದೇವಸ್ಥಾನಗಳಲ್ಲಿ ಗೋಶಾಲೆಗಳನ್ನು ಆರಂಭಿಸುವ ಉದ್ದೇಶ ಹೊಂದಲಾಗಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.


ಮುಜರಾಯಿ ಇಲಾಖೆಯ ವತಿಯಿಂದ ನಗರದ ಶ್ರೀ ಕಪಿಲೇಶ್ವರ ಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಹಸು ಹಾಗೂ ಕರುವಿಗೆ ಸಚಿವೆ ಗೋಧೂಳಿ ಶುಭ ಮುಹೂರ್ತದಲ್ಲಿ ಪೂಜೆಯನ್ನು ನೆರವೇರಿಸಿದರು. ಈ ಮೂಲಕ ರಾಜ್ಯಾದ್ಯಂತ ದೀಪಾವಳಿ(ಬಲಿಪಾಡ್ಯಮಿ) ದಿನದಂದು ಅಧಿಸೂಚಿತ ದೇವಸ್ಥಾನಗಳಲ್ಲಿ 'ಗೋ ಪೂಜಾ' ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ರಾಜ್ಯದ 35 ಸಾವಿರಕ್ಕೂ ಅಧಿಕ ಅಧಿಸೂಚಿತ ದೇವಸ್ಥಾನಗಳಲ್ಲಿ ಗೋಪೂಜೆ ನಡೆಸಲಾಗುತ್ತಿದೆ. ಗೋ ತಳಿಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸಬೇಕಿದೆ. ಭಾರತ ಕೃಷಿ ಪ್ರಧಾನವಾದ ದೇಶವಾಗಿರುವುದರಿಂದ ಗೋರಕ್ಷಣೆ ಮಹತ್ವದ್ದಾಗಿದೆ. ತಾಯಿ ಹಾಲಿನಷ್ಟೇ ಹಸುವಿನ ಹಾಲು ಪ್ರಾಮುಖ್ಯತೆ ಹೊಂದಿದೆ. ತಾಯಿ ಹಾಲು ಇಲ್ಲದಿದ್ದರೂ ಹಸುವಿನ ಹಾಲು‌ ಕುಡಿದು ನಾವು ಬದುಕಿದ್ದೇವೆ ಎಂದರು.

250ಕ್ಕೂ ಅಧಿಕ ದೇವಸ್ಥಾನಗಳಲ್ಲಿ ಮುಂಬರುವ ದಿನಗಳಲ್ಲಿ ಗೋಶಾಲೆ ಸ್ಥಾಪಿಸಲಾಗುವುದು. ಜಿಲ್ಲಾವಾರು ಎ ಮತ್ತು ಬಿ ಗ್ರೇಡ್ ದೇವಸ್ಥಾನಗಳ ಪಟ್ಟಿ ಪಡೆದುಕೊಂಡು ಯೋಜನೆ ರೂಪಿಸಲಾಗುವುದು. ಅರ್ಚಕರ ಕುಟುಂಬಕ್ಕೆ ಆರೋಗ್ಯ ವಿಮೆ ಒದಗಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಬೆಳಗಾವಿ ಸಂಸದ ಮಂಗಲ ಅಂಗಡಿ, ಅಣ್ಣಾಸಾಹೇಬ್ ಜೊಲ್ಲೆ, ಶಾಸಕ ಅಭಯ್ ಪಾಟೀಲ್​, ಅನಿಲ್ ಬೆನಕೆ ಉಪಸ್ಥಿತರಿದ್ದರು.

ಇದನ್ನೂ ಓದಿ:ಮಲೆಮಹದೇಶ್ವರ, ಚಾಮರಾಜೇಶ್ವರ ದೇವಾಲಯಗಳಲ್ಲಿ ಅದ್ಧೂರಿ ಗೋ ಪೂಜೆ

ABOUT THE AUTHOR

...view details