ಬೆಳಗಾವಿ :ರೈಲ್ವೆ ಇಲಾಖೆಯಲ್ಲಿರುವ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಪ್ರಾಯೋಗಿಕ ಪರಿಹಾರ ನೀಡುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ರೈಲು ಪ್ರಯಾಣ ಬೆಳೆಸಿದರು.
ಪ್ರಯಾಣಿಕರ ಸಮಸ್ಯೆ ಆಲಿಸಲು ರೈಲು ಪ್ರಯಾಣ; ಕೇಂದ್ರ ಸಚಿವರಿಂದ ಪ್ರಾಯೋಗಿಕ ಪರಿಹಾರ - ETV BHARAT
ರೈಲ್ವೆ ಇಲಾಖೆಯಲ್ಲಿರುವ ಸಮಸ್ಯೆಗಳನ್ನು ಆಲಿಸಿ ಅವುಗಳಿಗೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಒಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ರೈಲು ಪ್ರಯಾಣ ಬೆಳೆಸಿದರು.
ಬೆಳಗಾವಿ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಸುರೇಶ್ ಅಂಗಡಿ, ನಿಲ್ದಾಣದಲ್ಲಿ ಡಬ್ಲಿಂಗ್ ಕಾಮಗಾರಿ ಪರಿಶೀಲಿಸಿದರು. ನಂತರ ಬೆಳಗಾವಿ ಮಾರ್ಗವಾಗಿ ಹುಬ್ಬಳ್ಳಿವರೆಗೆ ರೈಲಿನಲ್ಲಿ ಪ್ರಯಾಣ ಮಾಡಿದರು.
ಇದಕ್ಕೂ ಮುನ್ನ ಕಪಿಲೇಶ್ವರ ಮಂದಿರದಿಂದ ಶನಿ ಮಂದಿರದವರೆಗೆ ರೈಲ್ವೆ ಮೆಲ್ಸೇತುವೆ ನಿರ್ಮಾಣವಾಗಿರುವುದರಿಂದ ಪಾದಚಾರಿಗಳಿಗೆ ಅನ್ಯಮಾರ್ಗ ಕಲ್ಪಿಸುವಂತೆ ಸಚಿವ ಅಂಗಡಿಯವರಿಗೆ ಸ್ಥಳೀಯರು ಮನವಿ ಮಾಡಿಕೊಂಡರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ತೊಂದರೆ ಸರಿಪಡಿಸಲು ಎಕ್ಸೆಲೇಟರ್, ಅಂಡರ್ ಪಾಸ್ ಅಥವಾ ಎರಡು ಕಡೆ ಲಿಫ್ಟ್ ಸೌಕರ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.