ಬೆಳಗಾವಿ: ಬೆಲ್ಲದ ಬಾಗೇವಾಡಿಯಲ್ಲಿ ತಂದೆ - ತಾಯಿಯ ಸಮಾಧಿ ಪಕ್ಕದಲ್ಲೇ ಉಮೇಶ ಕತ್ತಿ ಅಂತ್ಯಕ್ರಿಯೆ ನೇರವೇರಲಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೇರವೇರಲಿದ್ದು, ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕೂ ಮುನ್ನ ವಿಶ್ವರಾಜ್ ಶುಗರ್ಸ ಕಾರ್ಖಾನೆ ಆವರಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಗಣ್ಯರು ಹಾಗೂ ಬೆಂಬಲಿಗರು ಆಗಮಿಸಿ ಅಂತಿನ ನಮನ ಸಲ್ಲಿಸುತ್ತಿದ್ದಾರೆ.
ಅಂತಿಮ ದರ್ಶನದ ಬಳಿಕ ಪಾರ್ಥಿವ ಶರೀರವನ್ನು ಮನೆಗೆ ತಂದು ಬಳಿಕ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಸರ್ಕಾರದಿಂದ ಗೌರವ ವಂದನೆ ಸಲ್ಲಿಕೆ ಆಗಲಿದೆ.