ಕರ್ನಾಟಕ

karnataka

ETV Bharat / state

ರಾಮನಗರದಲ್ಲಿ 'ಅಯೋಧ್ಯೆ' ಮಾದರಿ ರಾಮಮಂದಿರ ನಿರ್ಮಿಸಲು ಸಿಎಂಗೆ ಸಚಿವ ಅಶ್ವತ್ಥನಾರಾಯಣ ಪತ್ರ

ಅಯೋಧ್ಯೆ ಮಾದರಿಯಲ್ಲಿ ಐತಿಹಾಸಿಕ ರಾಮದೇವರ ಬೆಟ್ಟವನ್ನು ಅಭಿವೃದ್ಧಿಪಡಿಸುವಂತೆ ಸಚಿವ ಡಾ. ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಪತ್ರ ಬರೆದಿದ್ದಾರೆ.

Minister wants Ram temple to be built in State on lines of Ayodhya
Minister wants Ram temple to be built in State on lines of Ayodhya

By

Published : Dec 21, 2022, 10:38 PM IST

Updated : Dec 22, 2022, 10:56 AM IST

ಬೆಳಗಾವಿ/ಬೆಂಗಳೂರು:ರಾಮನಗರದ ಐತಿಹಾಸಿಕ ರಾಮದೇವರ ಬೆಟ್ಟದಲ್ಲಿ ಅಯೋಧ್ಯೆಯಲ್ಲಿನ ರಾಮಮಂದಿರ ಮಾದರಿಯಲ್ಲಿಯೇ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆಯಿಂದ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸಚಿವ ಡಾ. ಅಶ್ವತ್ಥನಾರಾಯಣ ಒಲವು ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗೆ ಪತ್ರ ಬರೆದು ಒತ್ತಾಯ ಮಾಡಿದ್ದಾರೆ.

ರಾಮದೇವರ ಬೆಟ್ಟವನ್ನು ''ದಕ್ಷಿಣ ಬಾರತದ ಅಯೋಧ್ಯೆ''ಯಂತೆ ಬೆಳೆಯಬೇಕೆನ್ನುವ ಅಭಿಲಾಷೆಯನ್ನು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥನಾರಾಯಣ ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ. ಹಾಗೆಯೇ ಪತ್ರದ ಒಂದು ಪ್ರತಿಯನ್ನ ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆಯವರಿಗೂ ಬರೆದು ಗಮನ ಸೆಳೆದಿದ್ದಾರೆ.

ಸಿಎಂಗೆ ಸಚಿವ ಅಶ್ವತ್ಥನಾರಾಯಣ ಪತ್ರ

ಮುಜರಾಯಿ ಇಲಾಖೆಯ ಅಧೀನದಲ್ಲಿರುವ ಐತಿಹಾಸಿಕ ರಾಮದೇವರ ಬೆಟ್ಟದಲ್ಲಿ 19 ಎಕರೆ ವಿಸ್ತಾರವಾದ ಪ್ರದೇಶವಿದೆ. ಈ ಜಗದಲ್ಲಿ ಅಯೋಧ್ಯೆಯ ರಾಮ ಮಂದಿರದಂತೆಯೇ ಒಂದು ದೇವಸ್ಥಾನ ನಿರ್ಮಿಸುವ ಅವಶ್ಯಕತೆಯಿದೆ. ಈ ಸಂಬಂಧ ತ್ವರಿತವಾಗಿ ಒಂದು ಅಭಿವೃದ್ಧಿ ಸಮಿತಿಯನ್ನು ರಚಿಸಬೇಕು ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

ರಾಮನಗರದ ರಾಮದೇವರ ಬೆಟ್ಟವು ವಾನರ ಸಂತತಿಯ ಸುಗ್ರೀವನಿಂದ ಪ್ರತಿಷ್ಠಾಪಿತವಾಗಿದ್ದೆಂಬ ಐತಿಹ್ಯ ಹೊಂದಿದೆ. ರಾಮದೇವರ ಬೆಟ್ಟವನ್ನು ದಕ್ಷಿಣದ ಅಯೋಧ್ಯೆಯಂತೆ ಬೆಳೆಸಬೇಕೆನ್ನುವುದು ರಾಮನಗರ ಜಿಲ್ಲೆಯ ಸಾರ್ವಜನಿಕರು ಮತ್ತು ಭಕ್ತಾದಿಗಳ ಒತ್ತಾಸೆಯಾಗಿದೆ. ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಈ ಬೆಟ್ಟವನ್ನು ಭಕ್ತರ ಅಪೇಕ್ಷೆಯಂತೆ ಅಭಿವೃದ್ಧಿಪಡಿಸಿದರೆ ಸಂಸ್ಕೃತಿ ರಕ್ಷಣೆ ಮತ್ತು ಪ್ರವಾಸೋದ್ಯಮ ಬೆಳವಣಿಗೆ ಎರಡನ್ನೂ ಸಾಧಿಸಲು ಅವಕಾಶವಿದೆ ಎಂದು ಅವರು ತಮ್ಮ ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಶ್ರೀರಾಮನು ವನವಾಸದ ದಿನಗಳಲ್ಲಿ ಸೀತೆ ಮತ್ತು ಲಕ್ಷ್ಮಣರೊಂದಿಗೆ ರಾಮದೇವರ ಬೆಟ್ಟದಲ್ಲಿ ಒಂದು ವರ್ಷದ ಮಟ್ಟಿಗೆ ಇದ್ದನೆಂಬ ನಂಬಿಕೆ ರಾಮನಗರದ ಜನತೆಯಲ್ಲಿ ಇದೆ. ಇಲ್ಲಿರುವ ಪಾತಾಳಗಂಗೆಯ ಉದ್ಭವಕ್ಕೆ ರಾಮನೇ ಕಾರಣ ಎನ್ನುವ ಶ್ರದ್ಧೆ ಇದೆ. ಅಲ್ಲದೆ ಸಪ್ತರ್ಷಿಗಳು ಕೂಡ ಇಲ್ಲಿ ತಪಸ್ಸನ್ನು ಆಚರಿಸಿರುವ ಕುರುಹುಗಳಿವೆ. ಹಾಗೆಯೇ, ಈ ಬೆಟ್ಟವು ದೇಶದ ಏಕೈಕ ರಣಹದ್ದುಗಳ ಸಂರಕ್ಷಿತ ಪ್ರದೇಶವಾಗಿದೆ. ಈ ಪಕ್ಷಿಗಳಿಗೂ ರಾಮಾಯಣಕ್ಕೂ ಸಂಬಂಧವಿರುವುದು ಕೂಡ ಗಮನಾರ್ಹವಾಗಿದೆ ಎಂದು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಐತಿಹಾಸಿಕ ತಾಣವಾಗಿರುವ ರಾಮದೇವರ ಬೆಟ್ಟವು ತ್ರೇತಾಯುಗದಷ್ಟು ಹಿಂದಿನ ಪರಂಪರೆಯನ್ನು ಹೊಂದಿದೆ. ಇದನ್ನು ಆಕರ್ಷಕವಾಗಿ ಅಭಿವೃದ್ಧಿ ಪಡಿಸಿ, ಮುಂದಿನ ತಲೆಮಾರುಗಳಿಗೂ ದಾಟಿಸಬೇಕು ಎನ್ನುವುದು ಸ್ಥಳೀಯ ಜನರ ಅಭಿಲಾಷೆಯಾಗಿದೆ ಎಂದು ಸಚಿವ ಅಶ್ವತ್ಥನಾರಾಯಣ ಪತ್ರದಲ್ಲಿ ಗಮನ ಸೆಳೆದಿದ್ದಾರೆ.

ಇದನ್ನೂ ಓದಿ:ಅವರು ಚೀನಾದಂತೆ ಆಕ್ರಮಣ ಮಾಡಿದ್ರೆ ನಾವು ಭಾರತೀಯ ಸೇನೆಯಂತೆ ಹಿಮ್ಮೆಟ್ಟಿಸುತ್ತೇವೆ: ಮಹಾ ನಾಯಕರಿಗೆ ಸಿಎಂ ಟಾಂಗ್​

Last Updated : Dec 22, 2022, 10:56 AM IST

ABOUT THE AUTHOR

...view details