ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಚಿವೆ ಶಶಿಕಲಾ ಜೊಲ್ಲೆ - ಸಚಿವೆ ಶಶಿಕಲಾ ಜೊಲ್ಲೆ
ಡಾ. ಬಿ.ಆರ್ ಅಂಬೇಡ್ಕರ್ ಅವರ 129 ನೇ ಜನ್ಮವಾರ್ಷಿಕೋತ್ಸವದ ಅಂಗವಾಗಿ ಶ್ರೀ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾಲಾರ್ಪಣೆ ಮಾಡಿದ್ದಾರೆ.
![ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಚಿವೆ ಶಶಿಕಲಾ ಜೊಲ್ಲೆ Ministers have celebrated Ambedkar Jayanthi in chikkodi](https://etvbharatimages.akamaized.net/etvbharat/prod-images/768-512-6786478-780-6786478-1586851066610.jpg)
ಡಾ. ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ ಆಚರಿಸಿದ ಸಚಿವರು
ಚಿಕ್ಕೋಡಿ:ಭೀಮ ನಗರ ಹಾಗೂ ನ್ಯಾಯಲಯದ ಆವರಣದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 129 ನೇ ಜಯಂತಿ ಅಂಗವಾಗಿ ಶ್ರೀ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.