ಕರ್ನಾಟಕ

karnataka

ETV Bharat / state

ಸಿನಿಮೀಯ ಶೈಲಿಯಲ್ಲಿ ಮನೆಗೆ ಬೆಂಕಿ ಇಟ್ಟ ದುಷ್ಕರ್ಮಿಗಳು: ಹಲವರಿಗೆ ಗಾಯ, ದವಸ-ಧಾನ್ಯ ಭಸ್ಮ - ಅಥಣಿಯಲ್ಲಿ ಮನೆಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ತಡರಾತ್ರಿ 2 ಗಂಟೆ ಆಸುಪಾಸಿನಲ್ಲಿ ಕೆಲ ಕಿಡಿಗೇಡಿಗಳು ಕೋಲಿಗೆ ಬಟ್ಟೆ ಸುತ್ತಿ ಪೆಟ್ರೋಲ್ ಬಾಂಬ್ ರೀತಿಯಲ್ಲಿ ಎಸೆದಿದ್ದಾರೆ. ಪರಿಣಾಮ ಕೆಲವು ಮನೆಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಮನೆಯೊಳಗಿದ್ದ ಬೆಲೆಬಾಳುವ ವಸ್ತುಗಳು ಹಾಗೂ ದವಸ ಧಾನ್ಯಗಳು ಸುಟ್ಟು ಭಸ್ಮವಾಗಿವೆ.

miscreants set fire on houses in Atani
ಸಿನಿಮಾ ಶೈಲಿಯಲ್ಲಿ ಮನೆಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

By

Published : Feb 11, 2021, 5:33 PM IST

ಅಥಣಿ: ತಾಲೂಕಿನ ಕೋಕಟನೂರು ಗ್ರಾಮದಲ್ಲಿ ಸಿನಿಮೀಯ ಶೈಲಿಯಲ್ಲಿ ದುಷ್ಕರ್ಮಿಗಳು ಮನೆಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ಕೋಕಟನೂರು ನಿವಾಸಿ ಮಹದೇವ, ಸಿದ್ರಾಮ, ಮಾದರ ಎಂಬುವರ ಮನೆಗಳ ಮೇಲೆ ಬುಧವಾರ ತಡರಾತ್ರಿ 2 ಗಂಟೆ ಆಸುಪಾಸಿನಲ್ಲಿ ಕೆಲ ಕಿಡಿಗೇಡಿಗಳು ಕೋಲಿಗೆ ಬಟ್ಟೆ ಸುತ್ತಿ ಪೆಟ್ರೋಲ್ ಬಾಂಬ್ ರೀತಿಯಲ್ಲಿ ಎಸೆದಿದ್ದಾರೆ. ಪರಿಣಾಮ ಮನೆಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಮನೆಯೊಳಗಿದ್ದ ಬೆಲೆಬಾಳುವ ವಸ್ತುಗಳು ಹಾಗೂ ದವಸ ಧಾನ್ಯಗಳು ಸುಟ್ಟು ಭಸ್ಮವಾಗಿವೆ.

ಸಿನಿಮಾ ಶೈಲಿಯಲ್ಲಿ ಮನೆಗೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಓದಿ : ಬೆಂಗಳೂರಿನಲ್ಲಿ ಬೈಕ್​ ಎಗರಿಸಿದ ಖದೀಮ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಘಟನೆಯಿಂದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗ್ತಿದೆ. ಘಟನಾ ಸ್ಥಳಕ್ಕೆ ಅಥಣಿ ಸಿಪಿಐ ಶಂಕರಗೌಡ ಬಸವನಗೌಡ ಹಾಗೂ ಐಗಳಿ ಪಿಎಸ್ಐ ಶಿವರಾಜ್ ನಾಯಕವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐಗಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details