ಕರ್ನಾಟಕ

karnataka

ETV Bharat / state

ಭಾರತ ಬಂದ್​ಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ - ಭಾರತ ಬಂದ್​​ ಲೆಟೆಸ್ಟ್​ ನ್ಯೂಸ್​

ಇಂದು ರಾಜ್ಯಾದ್ಯಂತ ವಿವಿಧ ಬೇಡಿಕೆಗಳ ಈಡೇರಿಕೆಗೆ ವಿವಿಧ ಸಂಘಟನೆಗಳು ಹಮ್ಮಿಕೊಂಡಿದ್ದ ಬಂದ್​ಗೆ ಗಡಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾರತ ಬಂದ್​ಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ
Mixed Reaction to Bharat Bandh

By

Published : Jan 8, 2020, 8:08 PM IST

ಬೆಳಗಾವಿ : ಬೆಲೆ ಏರಿಕೆ ಸೇರಿದಂತೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ವಿವಿಧ ಸಂಘಟನೆಗಳು ಕರೆದಿದ್ದ ಬಂದ್​ಗೆ ಗಡಿ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾರತ ಬಂದ್​ಗೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ

ನಗರದಲ್ಲಿ ಎಐಟಿಸಿಯುಸಿ, ಸಿಐಟಿಯು, ಪಂಚಾಯತ್ ನೌಕರರ ಸಂಘ, ಅಂಗನವಾಡಿ ಕಾರ್ಯಕರ್ತೆಯರ ಸಂಘ, ಕೆಎಸ್ಆರ್​ಟಿಸಿ ನೌಕರರ ಸಂಘ, ಅಕ್ಷರ ದಾಸೋಹ ನೌಕರರ ಸಂಘ, ಕೆಪಿಸಿಸಿ ಕಾರ್ಮಿಕ ಘಟಕ, ಔಷಧ ಮಾರಾಟಗಾರರ ಸಂಘ ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಬಂದ್​ ಕರೆದಿದ್ದರೂ ಎಂದಿನಂತೆ ಬಸ್, ಆಟೋ, ಅಂಗಡಿ ಮುಂಗಟ್ಟು, ಶಾಲಾ-ಕಾಲೇಜು ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಚಿಕ್ಕೋಡಿಯಲ್ಲಿ ಬಂದ್​ಗೆ ನೀರಸ ಪ್ರತಿಕ್ರಿಯೆ:
ಬಂದ್​​ ನಿಮಿತ್ತ ಚಿಕ್ಕೋಡಿಯಲ್ಲಿ ಪ್ರತಿಭಟನಾಕಾರರು ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದ್ರು.
ನಗರದ ಆರ್.ಡಿ.ಪ್ರೌಢ ಶಾಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಿದ ಕಾರ್ಮಿಕರು ರ‍್ಯಾಲಿ ಮಾಡಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದರು. ಪೊಲೀಸರ ನಡೆ ವಿರುದ್ಧ ಆಕ್ರೋಶ ವ್ಯಕ್ತಪಡಿದ ಕಾರ್ಮಿಕ ಸಂಘಟನೆಗಳು ಸಭೆ ನಡೆಸಿದವು. ಬಳಿಕ ಸ್ಥಳಕ್ಕೆ ತಹಶೀಲ್ದಾರ್ ಆಗಮಿಸಿ ಮನವಿ ಸ್ವೀಕರಿಸಿದರು.

ಇನ್ನು ಚಿಕ್ಕೋಡಿ, ಅಥಣಿ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಭಾರತ ಬಂದ್​ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

ಭಾರತ ಬಂದ್​ನಿಂದ ಅಥಣಿಯಲ್ಲಿ ಯಾವುದೇ ಎಫೆಕ್ಟ್​ ಆಗಿಲ್ಲ:

ಅಥಣಿಯಲ್ಲಿ ಭಾರತ್​ ಬಂದ್​ ಯಾವುದೇ ಪರಿಣಾಮ ಬೀರಿಲ್ಲ. ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಬಿಟ್ಟರೆ ಪಟ್ಟಣದಲ್ಲಿ ಜನಸಾಮಾನ್ಯರು ದಿನನಿತ್ಯದ ಕೆಲಸದಲ್ಲಿ ನಿರತರಾಗಿದ್ದರು.

ABOUT THE AUTHOR

...view details