ಬೆಳಗಾವಿ: ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆಯಾಗಿದ್ದು, ಎಲ್ಲ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇತ್ತ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸ್ಥಾನಮಾನ ಪಡೆಯಲು ಅನ್ಯ ಮಾರ್ಗಗಳನ್ನು ಅನುಸರಿಸದೇ ಹಾಗೂ ಪಕ್ಷಕ್ಕೆ ನಿಷ್ಠೆ ಮತ್ತು ವಿಚಾರಕ್ಕೆ ಬದ್ಧತೆ ಇರುವ ಕಾರ್ಯಕರ್ತರಿಗೆ ಇಂದಿನ ದಿನಮಾನಗಳಲ್ಲಿ ಸ್ಥಾನವಿಲ್ಲ. ಇಂದಿನ ಈ ನಡೆ ವಿಷಾದಕರ ಸಂಗತಿ ಎಂದು ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿದರು.