ಬೆಳಗಾವಿ:ಗಾಂಧಿ ಜಯಂತಿ ಅಂಗವಾಗಿ ಇಂದು ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛ ಭಾರತ ಅಭಿಯಾನದಲ್ಲಿ ಖಾನಾಪುರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ರಸ್ತೆ ಪಕ್ಕದಲ್ಲಿದ್ದ ಕಸವಿಲೇವಾರಿ ಮಾಡುವ ಮೂಲಕ ಗಮನ ಸೆಳೆದರು.
ಸ್ವಚ್ಛ ಭಾರತ ಅಭಿಯಾನಕ್ಕೆ ಕೈ ಜೋಡಿಸಿದ ಶಾಸಕಿ... ಸಲಿಕೆ ಹಿಡಿದು ಕಸ ವಿಲೇವಾರಿ - ಕಾಂಗ್ರೆಸ್
ಇಂದು ದೇಶಾದ್ಯಂತ 150ನೇ ಗಾಂಧಿ ಜಯಂತಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಸ್ವಚ್ಛತಾ ಅಭಿಯಾನ ಸಹ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನಕ್ಕೆ ಸ್ಪಂದಿಸಿರುವ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ರಸ್ತೆ ಪಕ್ಕದಲ್ಲಿದ್ದ ಕಸ ವಿಲೇವಾರಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಗಾಂಧೀಜಿ ಅವರ 150 ನೇ ಜಯಂತಿಯ ಅಂಗವಾಗಿ ದೇಶಾದ್ಯಂತ ಸ್ವಚ್ಛ ಭಾರತ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಹ ಈ ಅಭಿಯಾನಕ್ಕೆ ಕೈಜೋಡಿಸಿದ್ದಾರೆ. ಈ ಅಭಿಯಾನದದಲ್ಲಿ ಖಾನಾಪುರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಭಾಗಿಯಾಗಿ ಪಟ್ಟಣದ ರಸ್ತೆ ಪಕ್ಕದಲ್ಲಿದ್ದ ಕಸವಿಲೇವಾರಿ ಮಾಡುವ ಮೂಲಕ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಿದ್ರು. ಸ್ವತಃ ಅವರೇ ಕೈಯಲ್ಲಿ ಸಲಿಕೆ ಹಿಡಿದು ಕಸ ತೆಗೆಯುವ ಮೂಲಕ ಗಮನ ಸೆಳೆದರು. ಶಾಸಕಿಗೆ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದ್ರು. ಶಾಸಕಿ ಅಂಜಲಿ ಅವರ ಈ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.