ಕರ್ನಾಟಕ

karnataka

ETV Bharat / state

ಬಿಜೆಪಿ ನೇತೃತ್ವದ ಕೇಂದ್ರ, ರಾಜ್ಯ ಸರ್ಕಾರದಿಂದ ಸಿಡಿ ಲೇಡಿಗೆ ಅನ್ಯಾಯ: ಶಾಸಕಿ ಅಂಜಲಿ ನಿಂಬಾಳ್ಕರ್ - ಶಾಸಕಿ ಅಂಜಲಿ ನಿಂಬಾಳ್ಕರ್ ಹೇಳಿಕೆ

ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಿಡಿ ಪ್ರಕರಣದ ಮಹಿಳೆಗೆ ಬೇರೆ ಬೇರೆ ವಿಷಯಗಳಲ್ಲಿ ಅನ್ಯಾಯವಾಗುತ್ತಿದೆ ಎಂದು ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಆರೋಪಿಸಿದರು.

MLA Dr Anjali nimbalkar
ಶಾಸಕಿ ಅಂಜಲಿ ನಿಂಬಾಳ್ಕರ್

By

Published : Apr 4, 2021, 7:09 PM IST

Updated : Apr 4, 2021, 7:27 PM IST

ಬೆಳಗಾವಿ:ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಿಡಿ ಪ್ರಕರಣದಲ್ಲಿ ಮಹಿಳೆಗೆ ಅನ್ಯಾಯವಾಗುತ್ತಿದೆ. ಆ ಘಟನೆಯಿಂದ ಎಲ್ಲಾ‌ ಮಹಿಳೆಯರಿಗೆ ನಾಚಿಕೆ ಆಗುತ್ತಿದೆ ಎಂದು‌ ಪರೋಕ್ಷವಾಗಿ ರಮೇಶ್ ಜಾರಕಿಹೊಳಿ‌ ಸಿಡಿ ವಿಚಾರ ಪ್ರಸ್ತಾಪಿಸಿ, ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ವಾಗ್ದಾಳಿ ನಡೆಸಿದರು.

ಶಾಸಕಿ ಅಂಜಲಿ ನಿಂಬಾಳ್ಕರ್ ಪ್ರತಿಕ್ರಿಯೆ

ಬೆಳಗಾವಿ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆ ಅಷ್ಟೇ ಅಲ್ಲ. ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಮಹಿಳೆಗೆ ಬೇರೆ ಬೇರೆ ವಿಷಯದಲ್ಲೂ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದರು.

ನಾನು ಯಳ್ಳೂರು ಭಾಗದಲ್ಲಿ ಮೊದಲ ಬಾರಿಗೆ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ. ಮರಾಠ ಸಮಾಜದಲ್ಲಿ ಬಹಳ ಹುಮ್ಮಸ್ಸು ಇದೆ. ಸತೀಶ್ ಜಾರಕಿಹೊಳಿ‌ ಅವರನ್ನು ಗೆಲ್ಲಿಸೋದಾಗಿ ಮರಾಠ ಸಮುದಾಯದವರು ಹೇಳಿದ್ದಾರೆ ಎಂದರು.

ಕಾಂಗ್ರೆಸ್‌ನಲ್ಲಿ ಆಂತರಿಕ ಕಚ್ಚಾಟ ಇದೆ ಎಂಬ ನಳಿನ್ ‌ಕುಮಾರ್ ಕಟೀಲ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ನಿಂಬಾಳ್ಕರ್​, ಅವರ ಸಂಪುಟ ಸಚಿವರಾಗಿರುವ ಕೆ. ಎಸ್. ಈಶ್ವರಪ್ಪ ಗವರ್ನರ್‌ಗೆ ಪತ್ರ ಬರೆದಿದ್ದಾರೆ. ಕಾಂಗ್ರೆಸ್​ನಲ್ಲಿ ಎಲ್ಲಿ ಕಚ್ಚಾಟವಿದೆ. ಬಿಜೆಪಿ ಕಚ್ಚಾಟವನ್ನು ಇಡೀ ದೇಶ, ರಾಜ್ಯ ನೋಡ್ತಿದೆ. ಕಾಂಗ್ರೆಸ್ ಪಕ್ಷದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ತಿರುಗೇಟು ನೀಡಿದರು.

ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕೆ ಹೋಗ್ತೀನಿ. ಮರಾಠ ಸಮುದಾಯ ಅಷ್ಟೇ ಅಲ್ಲ, ಎಲ್ಲಾ ಸಮುದಾಯದವರ ಬಳಿ ಕಾಂಗ್ರೆಸ್​ ಅಭ್ಯರ್ಥಿಗಳ ಪರವಾಗಿ ಪ್ರಚಾರ ಮಾಡುತ್ತೇನೆ. ಮರಾಠ ಸಮುದಾಯಕ್ಕೆ ಬಿಜೆಪಿ ಸರ್ಕಾರದಿಂದ ನ್ಯಾಯ ಸಿಕ್ಕಿಲ್ಲ ಎಂದು ದೂರಿದರು.

Last Updated : Apr 4, 2021, 7:27 PM IST

ABOUT THE AUTHOR

...view details