ಚಿಕ್ಕೋಡಿ:ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ರಾಜ್ಯದ 2ನೇ ಮಲ ಸಂಸ್ಕರಣಾ ಘಟಕಕ್ಕೆ ಶಾಸಕ ದುರ್ಯೋಧನ ಐಹೊಳೆ ಚಾಲನೆ ನೀಡಿದರು.
'ಸುಮಾರು 4 ಎಕರೆ ಪ್ರದೇಶದಲ್ಲಿ 54 ಲಕ್ಷ ರೂ. ವೆಚ್ಚದಲ್ಲಿ ಮಲ ಸಂಸ್ಕರಣ ಘಟಕ ನಿರ್ಮಾಣವಾಗುತ್ತಿದೆ. ಈ ಸಂಸ್ಕರಣ ಘಟಕದಲ್ಲಿ ಸಂಗ್ರಹವಾಗುವ ಮಲದಿಂದ ಕಾಂಪೋಸ್ಟ್ ಗೊಬ್ಬರ ತಯಾರಿಸಿ ರೈತರಿಗೆ ಪೂರೈಕೆ ಮಾಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ' ಎಂದು ಶಾಸಕ ಐಹೊಳೆ ತಿಳಿಸಿದರು.