ಬೆಳಗಾವಿ:ಉತ್ತರಕರ್ನಾಟಕ ಭಾಗದಲ್ಲಿ ಮುಂಬರುವ ದಿನಗಳಲ್ಲಿ ಲಿಂಗಾಯತ ಸಮಾಜ ಕಾಂಗ್ರೆಸ್ ಜೊತೆಗೆ ಬರುವ ರೀತಿಯಲ್ಲಿ ಪ್ರಯತ್ನಿಸಲಾಗುತ್ತದೆ ಎಂದು ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಪಕ್ಷ ಬಸವಾದಿ ಶರಣರ ತತ್ವಗಳ ಅಡಿಪಾಯದ ಮೇಲೆ ಜಾತ್ಯಾತೀತ ತತ್ವದ ಮೇಲೆ ನಡೆಯುತ್ತಿದೆ. ಎಲ್ಲಾ ಸಮಾಜದವರನ್ನು ಒಗ್ಗೂಡಿಸಿ ಕರೆದುಕೊಂಡು ಹೋಗಬೇಕು ಎಂಬ ಆಸೆಯಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನಮ್ಮ ಸಮಾಜ ಕೂಡ ಕಾಂಗ್ರೆಸ್ ಪಕ್ಷದ ಜೊತೆಗೆ ನಿಲ್ಲುವಂತೆ ಪ್ರಯತ್ನ ಮಾಡಲಾಗುವುದು ಎಂದರು.
ಕಾಂಗ್ರೆಸ್‍ನಲ್ಲಿ ಲಿಂಗಾಯತರಿಗೆ ಮುಂದಿನ ಸಿಎಂ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮೊದಲು ಚುನಾವಣೆಯಾಗಬೇಕು. ಚುನಾವಣೆಯಲ್ಲಿ 124 ಶಾಸಕರು ಗೆದ್ದು ಬರಬೇಕು. ಆ ಮೇಲೆ ಶಾಸಕರು ಸಿಎಲ್‍ಪಿ ನಾಯಕರನ್ನು ಹೈಕಮಾಂಡ್ ಜೊತೆಗೂಡಿ ಸಿಎಂ ನಿರ್ಧಾರ ಮಾಡುತ್ತಾರೆ. ಇಷ್ಟು ಬೇಗ ಅದರ ಬಗ್ಗೆ ಚರ್ಚೆ ಮಾಡುವುದು ಉಚಿತವಲ್ಲ, ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದರು.