ಕರ್ನಾಟಕ

karnataka

ETV Bharat / state

ರಾಜ್ಯ - ಕೇಂದ್ರದಲ್ಲಿ ಇರೋದು ಜುಮ್ಲಾ ಸರ್ಕಾರ‌: ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ - ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಇಂದಿರಾ ಕ್ಯಾಂಟೀನ್​ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್​ ಎಂದು ಬದಲಾವಣೆ ಮಾಡುವ ವಿಚಾರಕ್ಕೆ ಅಸಮಾಧಾನ ಹೊರಹಾಕಿರುವ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್​, ರಾಜ್ಯದಲ್ಲಿ, ಕೇಂದ್ರದಲ್ಲಿ ಇರೋದು ಜುಮ್ಲಾ ಸರ್ಕಾರಗಳು ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

mla lakshmi heblakar juma government statement
ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಟಿ

By

Published : Aug 9, 2021, 4:40 PM IST

ಬೆಳಗಾವಿ:ಇಂದಿರಾ ಕ್ಯಾಂಟೀನ್ ‌ಸಿದ್ದರಾಮಯ್ಯ ಅವರ ಜನಪ್ರಿಯ ಯೋಜನೆ. ಅವರ ಜನಪ್ರಿಯತೆ ಕಡಿಮೆ ಮಾಡಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.

ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗೋಷ್ಠಿ

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದೇಶಕ್ಕಾಗಿ ಇಂದಿರಾ ಗಾಂಧಿ ಅವರ ಬಲಿದಾನದ ಕೊಡುಗೆ ಸಾಕಷ್ಟಿದೆ. ಹೀಗಾಗಿ ಅವರ ಸಾಧನೆ ಯಾರಿಂದಲೂ ಅಳಿಸಲು ಸಾಧ್ಯವಿಲ್ಲ ಎಂದರು. ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್​ ಎಂದು ಬದಲಾವಣೆ ಮಾಡಿ ಇಂದಿರಾ ಗಾಂಧಿ ಹೆಸರು ಮಂಕು ಮಾಡಲು ಹೋದರೆ ಇದು ಬಿಜೆಪಿಯ ಭ್ರಮೆ ಅಷ್ಟೇ

ಜುಮ್ಲಾ ಸರ್ಕಾರ:

2019ರಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಭೀಕರ ಪ್ರವಾಹ ವಿಚಾರಕ್ಕೆ, 14 ಸಾವಿರ ಕೋಟಿ ಹಾನಿ ಆಗಿತ್ತು. ಆ ಪರಿಹಾರದ ಹಣವೇ ಇನ್ನೂ ಬಿಡುಗಡೆ ಆಗಿಲ್ಲ. ಕೊರೊನಾ ಪ್ಯಾಕೇಜ್ ಘೋಷಣೆ ಮಾಡಿದ್ರು. ಈವರೆಗೂ ಯಾವುದೇ ಪರಿಹಾರ ಬಿಡುಗಡೆ ಆಗಿಲ್ಲ. ರಾಜ್ಯದಲ್ಲಿ, ಕೇಂದ್ರದಲ್ಲಿ ಇರೋದು ಜುಮ್ಲಾ ಸರ್ಕಾರವಾಗಿದ್ದು, ದ್ವೇಷ, ಜಾತಿ - ಜಾತಿಗಳ ಮಧ್ಯೆ ಜಗಳ ಹಚ್ಚುವುದು ಬಿಜೆಪಿಯವರ ಕೆಲಸವಾಗಿದೆ. ಈ ಬಗ್ಗೆ ವಿಧಾನಸಭೆಯಲ್ಲಿ ಧ್ವನಿ ಎತ್ತುತ್ತೇವೆ ಎಂದರು.

ಅಧಿಕಾರ ದಾಹವೇ ಕಾರಣ:

ಕೊರೊನಾ, ಪ್ರವಾಹ ಸಂದರ್ಭದಲ್ಲಿ ಸಚಿವರು ಖಾತೆಗಾಗಿ ಕಿತ್ತಾಟ ನಡೆಸುತ್ತಿದ್ದಾರೆ. ಇದಕ್ಕೆ ಅಧಿಕಾರ ದಾಹವೇ ಪ್ರಮುಖ ಕಾರಣ. ಕೊನೆಯ ಅಧಿಕಾರಾವಧಿ ಎನ್ನುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತಿದೆ. ಸಿಎಂ ಬಸವರಾಜ ಬೊಮ್ಮಾಯಿ ಹೊಸಬರು.ಅವರಿಗೆ ಇನ್ನೂ ಸ್ವಲ್ಪ ಕಾಲ ಕಾಲಾವಕಾಶ ಕೊಡೋಣ ಎಂದರು.

ABOUT THE AUTHOR

...view details