ಬೆಳಗಾವಿ:ರಾಜ್ಯದಲ್ಲೇ ಬೆಳಗಾವಿ ಎರಡನೇ ಅತಿ ದೊಡ್ಡ ಜಿಲ್ಲೆ. ಹೀಗಾಗಿ ಜಿಲ್ಲೆಯಲ್ಲಿ ವ್ಯಾಕ್ಸಿನೇಷನ್, ಕೋವಿಡ್ ಟೆಸ್ಟ್ ಪ್ರಮಾಣ ಹೆಚ್ಚಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದರು.
ಬೆಳಗಾವಿಯಲ್ಲಿ ಟೆಸ್ಟಿಂಗ್, ವ್ಯಾಕ್ಸಿನೇಷನ್ ಪ್ರಮಾಣ ಹೆಚ್ಚಿಸಿ: ಸಿಎಂಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ - ಬೆಳಗಾವಿಯಲ್ಲಿ ಟೆಸ್ಟಿಂಗ್ ವ್ಯಾಕ್ಸಿನೇಷನ್ ಪ್ರಮಾಣ ಹೆಚ್ಚಿಸುವಂತೆ ಸಿಎಂಗೆ ಮನವಿ
ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಜಿಲ್ಲೆಯಲ್ಲಿ ಸದ್ಯ 7 ಸಾವಿರ ಟೆಸ್ಟ್ ನಡೆಸಲಾಗುತ್ತಿದೆ. ಬೆಳಗಾವಿ ಜಿಲ್ಲೆ ದೊಡ್ಡದಿದ್ದು, ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಬೇಕು ಎಂದು ಮನವಿ ಮಾಡಿದರು.
ಸಿಎಂಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ವೈದ್ಯರ ಕೊರತೆ ಹೆಚ್ಚಿದೆ. ವೈದ್ಯರ ನೇಮಕಕ್ಕೆ ಕ್ರಮ ವಹಿಸಬೇಕು. ಆಶಾ ಕಾರ್ಯಕರ್ತೆಯರು ಧೈರ್ಯದಿಂದ ಕೆಲಸ ಮಾಡುತ್ತಿದ್ದಾರೆ. ಆದರೆ ಕಳೆದ ಮೂರು ತಿಂಗಳಿಂದ ಆಶಾ ಕಾರ್ಯಕರ್ತೆಯರ ಸಂಬಳ ಆಗಿಲ್ಲ. ಶೀಘ್ರವೇ ಆಶಾ ಕಾರ್ಯಕರ್ತೆಯರ ಸಂಬಳ ನೀಡಿ ಆತ್ಮಸ್ಥೈರ್ಯ ದ್ವಿಗುಣಗೊಳಿಸಬೇಕು ಎಂದು ಮನವಿ ಮಾಡಿದರು. ಆಶಾ ಕಾರ್ಯಕರ್ತೆಯರಿಗೆ ಈಗಾಗಲೇ ಸಂಬಳ ಬಿಡುಗಡೆ ಮಾಡಿಸಿದ್ದೇನೆ ಎಂದು ಸಿಎಂ ಬಿಎಸ್‌ವೈ ಹೇಳಿದರು. ಸಿಎಂಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದನೆ ಸಲ್ಲಿಸಿದರು.
Last Updated : May 29, 2021, 2:13 PM IST