ಅಥಣಿ: ಬೆಂಗಳೂರಿನ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಗಳಲ್ಲಿ ನಡೆದಿರುವ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಪ್ರತಿಕ್ರಿಯೆ ನೀಡಿದರು.
ಕೋಮು ಸೌಹಾರ್ದತೆ ಕದಡುವ ಸಂಘಟನೆ ಮೇಲೆ ಕಠಿಣ ಕ್ರಮ ಕೈಗೊಳ್ಳಿ: ಶಾಸಕ ಮಹೇಶ್ ಕುಮಟಳ್ಳಿ ಆಗ್ರಹ - MLA Mahesh Kumatalli Statement
ಕೋಮು ಸೌಹಾರ್ದತೆ ಕದಡುವ ಸಂಘಟನೆ ಮೇಲೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಮಹೇಶ್ ಕುಮಟಳ್ಳಿ ಆಗ್ರಹಿಸಿದ್ದಾರೆ.
ಶಾಸಕ ಮಹೇಶ್ ಕುಮಟಳ್ಳಿ
ಅಥಣಿ ಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸಿ ನಂತರ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬೆಂಗಳೂರು ಗಲಭೆ ಪ್ರಕರಣ ಸೇರಿದಂತೆ ದೇಶಾದ್ಯಂತ ಕೋಮು ಗಲಭೆ ಸೃಷ್ಟಿಸುವ ಎಲ್ಲಾ ಸಂಘಟನೆಗಳ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು.
ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಹಾಗೂ ಶಾಂತಿ ಸುವ್ಯವಸ್ಥೆ ಕದಡುವ ಸಂಘಟನೆಗಳ ಮೇಲೆ ಶಿಸ್ತು ಕ್ರಮ ಜರುಗಿಸಬೇಕೆಂದು ಅವರು ಆಗ್ರಹಿಸಿದರು.