ಅಥಣಿ(ಬೆಳಗಾವಿ): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ವಿಚಾರ ಕುರಿತು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಎಲ್ಲ ಊಹಾಪೋಹ ಎಂದು ಸ್ಪಷ್ಟಪಡಿಸಿದ್ದಾರೆ.
ಅವರು 'ಈಟಿವಿ ಭಾರತ'ಪ್ರತಿನಿಧಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಅವರು, ರಾಜಕೀಯ ಬದಲಾವಣೆ ಸಮಯದಲ್ಲಿ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದ್ರೆ ಬಿಜೆಪಿಯಿಂದ ಗೆದ್ದಿರುವ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಊಹಾಪೋಹ ಮಾತುಗಳು ಕೇಳಿಬರುತ್ತಿವೆಯಷ್ಟೇ ಎಂದರು.