ಅಥಣಿ: ತಾಲೂಕಿನ ನಂದಗಾವ್ ಗ್ರಾಮದಲ್ಲಿ ನಬಾರ್ಡ್ ಯೋಜನೆ ಅಡಿಯಲ್ಲಿ ಹೆಚ್ಚುವರಿ ಶಾಲೆ ಕೊಠಡಿಗಳ ನಿರ್ಮಾಣ ಹಾಗೂ ಪಟ್ಟಣದಲ್ಲಿ ವಿವಿಧ ಅಭಿವೃದ್ಧಿಗೆ ಅಂದಾಜು ಎರಡು ಕೋಟಿ ರೂ. ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಭೂಮಿ ಪೂಜೆ ನೆರವೇರಿಸಿದರು.
ರಾಜ್ಯದಲ್ಲಿನ ಡ್ರಗ್ಸ್ ಮಾಫಿಯಾ ಬಗ್ಗೆ ಗೊತ್ತಿಲ್ಲ, ನನಗೆ ಅಥಣಿ ಅಭಿವೃದ್ಧಿ ಮಾತ್ರ ಕೇಳಿ: ಮಹೇಶ್ ಕುಮಟಳ್ಳಿ - ಅಥಣಿ ಸುದ್ದಿ
ಅಥಣಿ ಪುರಸಭೆ ವ್ಯಾಪ್ತಿಯಲ್ಲಿ 34 ಕೋಟಿ ರೂಪಾಯಿಗಳಲ್ಲಿ ಅಭಿವೃದ್ಧಿ ಮಾಡಲಾಗಿದೆ. ಹಾಗೂ ಸರ್ಕಾರದಿಂದ 9 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಅನುದಾನ ತರಲಾಗಿದೆ.
ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಥಣಿ ಪುರಸಭೆ ವ್ಯಾಪ್ತಿಯಲ್ಲಿ 34 ಕೋಟಿ ರೂಪಾಯಿಗಳಲ್ಲಿ ಅಭಿವೃದ್ಧಿ ಮಾಡಲಾಗಿದೆ. ಹಾಗೂ ಸರ್ಕಾರದಿಂದ 9 ಕೋಟಿ ರೂಪಾಯಿ ಹೆಚ್ಚುವರಿಯಾಗಿ ಅನುದಾನ ತರಲಾಗಿದೆ. ಅಥಣಿ ಪುರಸಭೆ ವ್ಯಾಪ್ತಿಯಲ್ಲಿ ಅಭಿವೃದ್ಧಿಗಾಗಿ 3.25 ಕೋಟಿ ಹೆಚ್ಚುವರಿಯಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಪಟ್ಟಣದಲ್ಲಿ ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಬಗ್ಗೆ ನನಗೆ ಗೊತ್ತಿಲ್ಲ, ಅಥಣಿ ಅಭಿವೃದ್ದಿಯೇ ನನ್ನ ಮೂಲ ಉದ್ದೇಶವಾಗಿದೆ. ಕೊಟ್ಟಲಗಿ ಕಕಮರಿ ನೀರಾವರಿ ಯೋಜನೆ ಮತ್ತು ಸವಳು-ಜವಳು ಯೋಜನೆ ಹಾಗೂ ಸುಗಮ ಸಂಚಾರ ರಸ್ತೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನಿಡಲಾಗುವುದು. ಈ ಡ್ರಗ್ಸ್ ವಿಚಾರದ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದರು.