ಬೆಳಗಾವಿ: ಕೊರೊನಾ ವೈರಸ್ ಹರಡದಂತೆ ದೇಶಾದ್ಯಂತ ಲಾಕ್ಡೌನ್ ಮಾಡಲಾಗಿದೆ. ಇದರಿಂದಾಗಿ ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸಲಾಗದೇ ಸಂಕಷ್ಟದಲ್ಲಿರುವ ರೈತರ ನೆರವಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಬಂದಿದ್ದಾರೆ.
ರೈತರಿಗೆ ನೆರವಾದ ಸತೀಶ್ ಜಾರಕಿಹೊಳಿ... ಮಾಡಿದ್ದೇನು ಗೊತ್ತಾ? - belgavi Corona Effect
ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿರುವ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಹೂ ಕೋಸು, ಎಲೆಕೋಸು ಹಾಗೂ ತರಕಾರಿಗಳಿಗೆ ಸೂಕ್ತ ಬೆಲೆ ಸಿಗದೇ ಇರುವುದರಿಂದ ಅವುಗಳನ್ನು ಎಸೆದು ನಾಶ ಮಾಡುತ್ತಿದ್ದರು. ಹೀಗಾಗಿ ರೈತರ ಬೆನ್ನೆಲುಬಾಗಿ ನಿಂತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಯೋಗ್ಯ ದರದಲ್ಲಿ ತರಕಾರಿಗಳನ್ನು ಖರೀದಿಸಿ, ಕ್ಷೇತ್ರದ ಬಡ ಜನರಿಗೆ ವಿತರಿಸುತ್ತಿದ್ದಾರೆ.
ಸತೀಶ್ ಜಾರಕಿಹೊಳಿ
ಯಮಕನಮರಡಿ ಕ್ಷೇತ್ರದ ವ್ಯಾಪ್ತಿಯಲ್ಲಿರುವ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಹೂ ಕೋಸು, ಎಲೆಕೋಸು ಹಾಗೂ ತರಕಾರಿಗಳಿಗೆ ಸೂಕ್ತ ಬೆಲೆ ಸಿಗದೇ ಇರುವುದರಿಂದ ಅವುಗಳನ್ನು ಎಸೆದು ನಾಶ ಮಾಡುತ್ತಿದ್ದರು. ಹೀಗಾಗಿ ಜಾರಕಿಹೊಳಿ ಅವರು ಯೋಗ್ಯ ದರದಲ್ಲಿ ತರಕಾರಿಗಳನ್ನು ಖರೀದಿಸಿ ಕ್ಷೇತ್ರದ ಬಡ ಜನರಿಗೆ ವಿತರಿಸುತ್ತಿದ್ದಾರೆ.
ಸಂಕಷ್ಟದ ಸ್ಥಿತಿಯಲ್ಲಿರುವ ರೈತರು ಬೆಳೆದ ತರಕಾರಿಗಳನ್ನು ಖರೀದಿಸಲು ಯಾರೂ ಮುಂದಾಗದೇ ಇರುವ ಇಂತಹ ಸಂದರ್ಭಗಳಲ್ಲಿ ಶಾಸಕರು ಖುದ್ದಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಯೋಗ್ಯ ಬೆಲೆಯಲ್ಲಿ ತರಕಾರಿ ಖರೀದಿಸಿ ಜನರಿಗೆ ವಿತರಿಸುತ್ತಿದ್ದಾರೆ.