ಚಿಕ್ಕೋಡಿ: ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಪಕ್ಷ ಸೇರುವಾಗ ನನಗೆ ಹಣದ ಆಫರ್ ಬಂದಿತ್ತು. ಆದರೆ, ನಾನು ಯಾವುದೇ ಹಣ ಬೇಡಿಕೆ ಇಡದೇ, ಸಮಾಜ ಸೇವೆಗೆ ನನಗೆ ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ ಎಂದು ಶಾಸಕ ಶ್ರೀಮಂತ ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಕಾಮಗಾರಿಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಅವರು, ಬಿಜೆಪಿ ಪಕ್ಷ ಸೇರುವಾಗ ನನಗೆ ಹಣದ ಆಫರ್ ಬಂದಿತ್ತು. ಆದರೆ, ನಾನು ಯಾವುದೇ ದುಡ್ಡು ತೆಗೆದುಕೊಳ್ಳದೇ ನನಗೆ ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ. ಅದರಂತೆ ಅವರು ನನಗೆ ಸಚಿವ ಸ್ಥಾನ ನೀಡಿದ್ದರು. ಸದ್ಯ ಸಚಿವ ಸ್ಥಾನದಿಂದ ಕೈಬಿಟ್ಟಿದ್ದಾರೆ ಮುಂಬರುವ ದಿನದಲ್ಲಿ ಮತ್ತೆ ಸಚಿವ ಸ್ಥಾನ ಕೊಡುತ್ತಾರೆ ಎಂಬ ಭರವಸೆ ಇದೆ ಎಂದರು.