ಅಥಣಿ :ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದೆಹಲಿ ಪ್ರವಾಸ ಕೈಗೊಂಡ ಹಿನ್ನೆಲೆ ಸಚಿವ ಸ್ಥಾನದ ಆಕಾಂಕ್ಷಿಗಳ ಆಲೋಚನೆ ಗರಿಗೆದರಿವೆ. ಆದರೆ, ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಅವರು ಸಚಿವ ಸ್ಥಾನಕ್ಕಾಗಿ ನಾನು ಭಿಕ್ಷೆ ಬೇಡುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.
ಅವರು ಕಾಗವಾಡ ಪಟ್ಟಣದಲ್ಲಿ ಮಾಧ್ಯಮದ ಜೊತೆ ಮಾತನಾಡುತ್ತಾ, ಸಚಿವ ಸಂಪುಟ ವಿಸ್ತರಣೆ, ಪುನರ್ರಚನೆ ಎಂಬುದು ನನಗೆ ಗೊತ್ತಿಲ್ಲ. ಹೈಕಮಾಂಡ್ ಸ್ಥಾನಮಾನ ಕೊಟ್ಟರೆ ಮಾಡುತ್ತೇನೆ. ಇಲ್ಲವಾದರೆ ನಾನು ಯಾರ ಹತ್ತಿರನೂ ಮಂತ್ರಿ ಸ್ಥಾನದ ಬಗ್ಗೆ ಕೇಳುವುದಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.