ಚಿಕ್ಕೋಡಿ :ಶಿರಾ ಹಾಗೂ ಆರ್.ಆರ್ ನಗರ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷ ಜಯಭೇರಿ ಭಾರಿಸಲಿದೆ ಎಂದು ಹುಕ್ಕೇರಿ ಶಾಸಕ ಉಮೇಶ ಕತ್ತಿ ಹೇಳಿದರು.
RR ನಗರದಲ್ಲಿ 50, ಶಿರಾದಲ್ಲಿ 20 ಸಾವಿರ ಮತಗಳ ಅಂತರದಲ್ಲಿ ಬಿಜೆಪಿ ಗೆಲ್ಲುತ್ತೆ: ಉಮೇಶ್ ಕತ್ತಿ ವಿಶ್ವಾಸ - Umesh Katti on RR Nagar by poll
ಶಿರಾ ಹಾಗೂ ಆರ್.ಆರ್ ನಗರ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಶಾಸಕ ಉಮೇಶ್ ಕತ್ತಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹುಕ್ಕೇರಿ ಪಟ್ಟಣದಲ್ಲಿ ಮಾತನಾಡಿದ ಅವರು, ಆರ್.ಆರ್ ನಗರದಲ್ಲಿ 50 ಸಾವಿರ ಮತಗಳ ಅಂತರದಿಂದ ಹಾಗೂ ಶಿರಾ 25 ಸಾವಿರ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆ. ಉಪಚುನಾವಣೆಯ ಗೆಲುವು ಬಿಜೆಪಿ ಶಕ್ತಿಯನ್ನ ಮತ್ತಷ್ಟು ಹೆಚ್ಚಿಸಲಿದೆ ಎಂದರು.
ಮುಖ್ಯಮಂತ್ರಿಗಳು ಹುಮ್ಮಸ್ಸಿನಿಂದ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನ ರಾಜಕೀಯ ಅಸ್ತಿತ್ವ ಕಳೆದಕೊಂಡಿದೆ, ಕಾಂಗ್ರೆಸ್ ಮುಖಂಡರು ಭ್ರಷ್ಟಾಚಾರದ ಆರೋಪ ಮಾಡುವ ಬದಲು, ಸಾಬೀತುಪಡಿಸಲಿ. ಜನರ ಮುಂದೆ ಸುಳ್ಳು ಹೇಳುವುದನ್ನು ಬಿಡಲಿ. ಭ್ರಷ್ಟಾಚಾರ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಪದ್ದತಿ. ಸುಳ್ಳಾರೋಪ ಮಾಡುವ ಬದಲು, ತಪ್ಪಿದ್ದಲ್ಲಿ ತಿದ್ದುವ ಕೆಲಸ ವಿರೋಧ ಪಕ್ಷ ಮಾಡಬೇಕಿದೆ ಎಂದು ಹೇಳಿದರು.