ಕರ್ನಾಟಕ

karnataka

ETV Bharat / state

ಕೃಷ್ಣಾ ನದಿ ದಡದ ಗ್ರಾಮ, ಶಾಲೆಗಳಲ್ಲಿ ಮುಂಜಾಗೃತ ಕ್ರಮಕ್ಕೆ ಶಾಸಕರ ಸೂಚನೆ - flood affected area

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿನ ಕೃಷ್ಣಾ ನದಿ ದಡದ ಗ್ರಾಮ, ಶಾಲೆಗಳಿಗೆ ಭೇಟಿ ನೀಡಿ, ಪ್ರವಾಹ ಪೀಡಿತ ಪ್ರದೇಶಗಳ ಮಾಹಿತಿ ಪಡೆದ ಶಾಸಕ ಗಣೇಶ ಹುಕ್ಕೇರಿ. ಸೂಕ್ತ ಮುಂಜಾಗೃತ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ.

ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ಶಾಸಕ ಗಣೇಶ ಹುಕ್ಕೇರಿ

By

Published : Aug 3, 2019, 9:10 AM IST

ಚಿಕ್ಕೋಡಿ:ಶಾಸಕ ಗಣೇಶ ಹುಕ್ಕೇರಿ ಇಲ್ಲಿನಪ್ರವಾಹ ಪೀಡಿತ ಗ್ರಾಮಗಳಿಗೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡರು.

ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ ಶಾಸಕ ಗಣೇಶ ಹುಕ್ಕೇರಿ

ಮಹಾರಾಷ್ಟ್ರದ ಘಟ್ಟಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಸತಾರಾ ಜಿಲ್ಲೆಯ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡಲಾಗಿದೆ. ಇದರಿಂದ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು. ನದಿಯ ಸುತ್ತಲಿನ ಗ್ರಾಮಸ್ಥರು ಪರದಾಡುವಂತಾಗಿದೆ.

ಚಿಕ್ಕೋಡಿ ತಾಲೂಕಿನ ಇಂಗಳಿ, ಯಡೂರ, ಯಡುರವಾಡಿ ಮತ್ತು ಕಲ್ಲೋಳ ಗ್ರಾಮಗಳು ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿವೆ. ಯಾವುದೇ ಸಮಸ್ಯೆಗಳು ತಲೆದೂರದಂತೆ ಸೂಕ್ತ ರಕ್ಷಣಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು. ನದಿ ದಡದ ಶಾಲೆಗಳಿಗೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಶಿಕ್ಷಕರಿಗೆ ಹೇಳಿದರು.

ಚಿಕ್ಕೋಡಿ ಎಸಿ ರವೀಂದ್ರ ಹಾಗೂ ತಹಸೀಲ್ದಾರ ಸಂತೋಷ ಬಿರಾದರ್ ಶಾಸಕರಿಗೆ ಪ್ರವಾಹ ಪ್ರದೇಶಗಳ ಸಂಪೂರ್ಣ ಮಾಹಿತಿಯನ್ನು ನೀಡಿದರು.

ABOUT THE AUTHOR

...view details