ಬೆಳಗಾವಿ:ಒಂದು ವಾರದ ಹಿಂದೆ ರೂಮ್ ಬುಕ್ ಮಾಡಿದ್ದರೂ ಕಾಯ್ದಿರಿಸದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಶಾಸಕ ಯತೀಂದ್ರ ಸಿದ್ದರಾಮಯ್ಯ, ಖಾಸಗಿ ಹೋಟೆಲ್ ಸಿಬ್ಬಂದಿಯೊಬ್ಬರನ್ನು ತರಾಟೆಗೆ ತೆಗೆದುಕೊಂಡರು.
ನಾಳೆಯಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಭಾನುವಾರ ಸಂಜೆ ಬೆಳಗಾವಿಯಲ್ಲಿ ಕಾಂಗ್ರೆಸ್ ಚುನಾವಣೆ ಸಮಿತಿ ಸಭೆ ನಡೆಯಲಿದೆ. ಇಂದೇ ಬೆಳಗಾವಿಗೆ ಬಹುತೇಕ ಕಾಂಗ್ರೆಸ್ ಶಾಸಕರು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ಖಾಸಗಿ ಹೋಟೆಲ್‌ಗೆ ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ.