ಬೆಳಗಾವಿ : ನರೇಂದ್ರ ಮೋದಿ ಸುಳ್ಳು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ದೇಶದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಮಾತಿನಿಂದ ಮರುಳು ಮಾಡುವುದನ್ನು ಬಿಡಬೇಕು ಎಂದು ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ನಗರದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಪ್ರತಿಯೊಬ್ಬ ಕಾರ್ಯಕರ್ತರು ಸಿದ್ದರಾಮಯ್ಯನವರ ಅಧಿಕಾರಾವಧಿಯಲ್ಲಿ ಆದ ಜನಪರ ಕೆಲಸಗಳನ್ನು ಮತದಾರರಿಗೆ ಮುಟ್ಟಿಸುವ ಕೆಲಸ ಮಾಡಬೇಕು. ಜೊತೆಗೆ ನರೇಂದ್ರ ಮೋದಿಯವರ ಆಡಳಿತದ ಅವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ದೇಶದಲ್ಲಿ ಆಗಿಲ್ಲ. ಹಾಗಾಗಿ ಅವರನ್ನು ಸೋಲಿಸಿ ದೇಶ ಉಳಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.