ಬೆಳಗಾವಿ:ಪ್ರಧಾನಿ ನರೇಂದ್ರ ಮೋದಿ ಜೊತೆಗೆ ದೆಹಲಿಯಲ್ಲಿ ಇಂದು ನಡೆಯಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯ ವಿದ್ಯಾರ್ಥಿಯೋರ್ವ ಭಾಗಿಯಾಗುತ್ತಿದ್ದಾನೆ.
ಪ್ರಧಾನಿ ಮೋದಿ ಜೊತೆ ಪರೀಕ್ಷಾ ಪೇ ಚರ್ಚಾ: ಸವದತ್ತಿಯ ವಿದ್ಯಾರ್ಥಿ ಭಾಗಿ - ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ
ಪ್ರಧಾನಿ ನರೇಂದ್ರ ಮೋದಿ ಜೊತೆಗೆ ದೆಹಲಿಯಲ್ಲಿ ಇಂದು ನಡೆಯಲಿರುವ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಬೆಳಗಾವಿ ಜಿಲ್ಲೆಯ ವಿದ್ಯಾರ್ಥಿಯೋರ್ವ ಭಾಗಿಯಾಗುತ್ತಿದ್ದಾನೆ. ಜೋತಿರಾದಿತ್ಯ ಕಳ್ಳಿಮನಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವ ವಿದ್ಯಾರ್ಥಿ.
ವಿದ್ಯಾರ್ಥಿ ಜೋತಿರಾದಿತ್ಯ ಕಳ್ಳಿಮನಿ
ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯದ 10ನೇ ತರಗತಿ ಜೋತಿರಾದಿತ್ಯ ಕಳ್ಳಿಮನಿ, ಸಂವಾದದಲ್ಲಿ ಭಾಗಿಯಾಗುತ್ತಿರುವ ವಿದ್ಯಾರ್ಥಿ. ಈ ಬಗ್ಗೆ ಮಾತನಾಡಿದ ವಿದ್ಯಾರ್ಥಿ ಜೋತಿರಾದಿತ್ಯ, ಕಾರ್ಯಕ್ರಮಕ್ಕೆ ಆಯ್ಕೆಯಾಗಿರುವುದು ಸಂತಸ ತಂದಿದೆ. 10ನೇ ತರಗತಿಯಲ್ಲಿ 60 ವಿದ್ಯಾರ್ಥಿಗಳಿದ್ದು, ಇದರಲ್ಲಿ ನಾನೊಬ್ಬನೇ ಆಯ್ಕೆಯಾಗಿದ್ದೇನೆ. ನನ್ನ ಆಯ್ಕೆಗೆ ಕಾರಣರಾದ ಎಲ್ಲಾ ಶಿಕ್ಷಕರಿಗೆ ಋಣಿಯಾಗುವೆ ಎಂದಿದ್ದಾನೆ.
ವಿದ್ಯಾರ್ಥಿ ಜೋತಿರಾದಿತ್ಯ ಕಳ್ಳಿಮನಿಯನ್ನು ಸವದತ್ತಿ ಶಾಸಕ ಆನಂದ ಮಾಮನಿ ಸತ್ಕರಿಸಿ ಬೀಳ್ಕೊಟ್ಟಿದ್ದಾರೆ.
TAGGED:
ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮ