ಕರ್ನಾಟಕ

karnataka

ETV Bharat / state

ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ.. ಮಹಾರಾಷ್ಟ್ರದಲ್ಲಿ ಕರ್ನಾಟಕ ಮಹಿಳೆಯ ದಾರುಣ ಅಂತ್ಯ - ತಾಯಿ ಮತ್ತು ಮೂರು ಹೆಣ್ಣು ಮಕ್ಕಳು ಆತ್ಮಹತ್ಯೆ

ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ
ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ

By

Published : Oct 11, 2022, 10:21 AM IST

ಅಥಣಿ (ಬೆಳಗಾವಿ): ಪಕ್ಕದ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಬಿಳ್ಳೂರ ಗ್ರಾಮದ ಹೊರವಲಯದಲ್ಲಿ ತಾಯಿ ಮತ್ತು ಮೂರು ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ಸೋಮವಾರ ನಡೆದಿದೆ. ಮೃತ ಮಹಿಳೆ ಬೆಳಗಾವಿ ಮೂಲದವರಾಗಿದ್ದು, ಮಹಾರಾಷ್ಟ್ರ ವ್ಯಕ್ತಿಯನ್ನು ಮದುವೆಯಾಗಿದ್ದರು.

ಮೂರು ಹೆಣ್ಣು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ: ಮೃತಪಟ್ಟವರನ್ನು ತಾಯಿ ಸುನೀತಾ ತುಕಾರಾಮ ಮಾಳಿ (27), ಮಕ್ಕಳಾದ ಅಮೃತಾ ತುಕಾರಾಮ ಮಾಳಿ (13), ಅಂಕಿತ ತುಕಾರಾಮ ಮಾಳಿ (10) ಮತ್ತು ಐಶ್ವರ್ಯ ತುಕಾರಾಮ ಮಾಳಿ (7) ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನದ ಹಿಂದೆ ನಾಪತ್ತೆಯಾಗಿದ್ದಾರೆ ಎಂದು ಕುಟುಂಬಸ್ಥರು ಜತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದರು.

ಸೋಮವಾರ ದಿನದಂದು ಬಿಳ್ಳೂರ ಗ್ರಾಮದ ಹೊರವಲಯದ ಕೆರೆಯಲ್ಲಿ ನಾಲ್ಕು ಜನರ ಮೃತ ದೇಹಗಳು ತೇಲುತ್ತಿದ್ದುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸತ್ಯಾಸತ್ಯತೆ ಪೊಲೀಸ್ ತನಿಖೆಯಿಂದ ಹೊರಬರಬೇಕು.

ಘಟನೆ ವಿವರ: ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ ಸುನೀತಾ ತುಕಾರಾಮ ಮಾಳಿ (27) ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದ ನಿವಾಸಿ. ಕಳೆದ 14 ವರ್ಷದ ಹಿಂದೆ ಪಕ್ಕದ ಮಹಾರಾಷ್ಟ್ರ ರಾಜ್ಯದ ಬಿಳ್ಳೂರ ಗ್ರಾಮದ ತುಕಾರಾಮ ಮಾಳಿ ಎಂಬುವರ ಜೊತೆ ವಿವಾಹವಾಗಿದ್ದರು. ಆದರೆ ತುಕಾರಾಮ ನಿತ್ಯ ಮದ್ಯ ಸೇವಿಸಿ ಮನೆಯಲ್ಲಿ ಕಿರುಕುಳ ಕೊಡುತ್ತಿದ್ದ ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹದಿಂದ ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಹಾರಾಷ್ಟ್ರ ಜತ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(ಓದಿ: ಬಳ್ಳಾರಿಯ ಸಾರ್ವಜನಿಕ ಸ್ಥಳದಲ್ಲಿ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಆತ್ಮಹತ್ಯೆ ಯತ್ನ)

ABOUT THE AUTHOR

...view details