ಚಿಕ್ಕೋಡಿ:ಇಬ್ಬರು ಮಕ್ಕಳೊಂದಿಗೆ ಮಹಿಳೆವೋರ್ವಳು ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ನೊಗನಿಹಾಳ ಗ್ರಾಮದಲ್ಲಿ ನಡೆದಿದೆ.
ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ: ಮೂವರನ್ನು ಬಲಿ ಪಡೆಯಿತೇ ಕೌಟುಂಬಿಕ ಕಲಹ?
ತಾಯಿವೋರ್ವಳು ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಹುಕ್ಕೇರಿ ತಾಲೂಕಿನಲ್ಲಿ ನಡೆದಿದೆ.
ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ನೊಗನಿಹಾಳ ಗ್ರಾಮದ ಮಲ್ಲವ್ವಾ ಬಸವರಾಜ ಮರಬಸ್ಸನವರ (35) ತನ್ನ ಮಕ್ಕಳಾದ ಸಿದ್ಧಪ್ಪ (3), ಗುರುನಾಥ (10) ಎಂಬುವರೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಹುಕ್ಕೇರಿ ಪಿಎಸ್ಐ ಶಿವಾನಂದ ಗುಡಗನಟ್ಟಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಈ ಕುರಿತು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.