ಬೆಳಗಾವಿ: ಪ್ರವಾಹದಿಂದ ನಲುಗಿ ಹೋಗಿರುವ ಜಿಲ್ಲೆಯ ನಿರಾಶ್ರಿತರನ್ನು ಸಂಸದ ಅನಂತಕುಮಾರ್ ಹೆಗಡೆಗೆ ಭೇಟಿ ಮಾಡಿದ ವೇಳೆ ಮಹಿಳೆಯರು ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಿನಗೆ ವೋಟ್ ಹಾಕುವುದಿಲ್ಲ : ಅನಂತಕುಮಾರ್ ಹೆಗಡೆ ವಿರುದ್ಧ ಮಹಿಳೆಯರ ಆಕ್ರೋಶ - ಸಂಸದ ಅನಂತಕುಮಾರ್ ಹೆಗಡೆ
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಿರಾಶ್ರಿತರನ್ನು ಸಂಸದ ಅನಂತಕುಮಾರ್ ಹೆಗಡೆಗೆ ಭೇಟಿ ಮಾಡಿದ ವೇಳೆ ಮಹಿಳೆಯರು ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅನಂತಕುಮಾರ್ ಹೆಗಡೆ
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಸಂಸದ ಅನಂತಕುಮಾರ್ ಹೆಗಡೆ ನಿರಾಶ್ರಿತ ಕೇಂದ್ರಕ್ಕೆ ತೆರಳಿದ್ದರು. ಈ ವೇಳೆ ಮಲಪ್ರಭಾ ನದಿಯ ನೆರೆಯಲ್ಲಿ ಮನೆಗಳನ್ನ ಕಳೆದುಕೊಂಡ ಜನ ತಮಗೆ ಮನೆ ಕಟ್ಟಿಸಿಕೊಡಿ ಎಂದು ಕೇಳಿಕೊಂಡರು. ಇದಕ್ಕೆ ಸರಿಯಾಗಿ ಸ್ಪಂದಿಸದ ಅನಂತಕುಮಾರ್ ಹೆಗಡೆ ವಿರುದ್ಧ ಮಹಿಳೆಯರು, ನಿನಗೆ ವೋಟ್ ಹಾಕುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಮಹಿಳೆಯರ ಮಾತು ಕೇಳಿಯೂ ಕೇಳಿಸದಂತೆ ಸಂಸದ ಅನಂತಕುಮಾರ್ ಹೆಗಡೆ ಕುಳಿತಿದ್ದರು. ಕೆಲ ಸಮಯದ ಬಳಿಕ ಮತ್ತೊಂದು ಗಂಜಿ ಕೇಂದ್ರಕ್ಕೆ ಅನಂತಕುಮಾರ್ ಹೆಗಡೆ ತೆರಳಿದರು.