ಅಥಣಿ (ಬೆಳಗಾವಿ): ಬೆಳಗಾವಿ ಜಿಲ್ಲೆಯಲ್ಲಿ 2 ದಿನಗಳ ಕಾಲ ಸೆಕ್ಷನ್ 144 ಜಾರಿಯಲ್ಲಿದ್ದರೂ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಕೋಕಟನೂರ ಗ್ರಾಮದಲ್ಲಿ ಸಭೆ ನಡೆಸಿ ಎಡವಟ್ಟು ಮಾಡಿದ್ದಾರೆ.
ಕೋಕಟನೂರ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಅಥಣಿ ತಾಲೂಕು ಆಡಳಿತ ಹಾಗೂ ಗ್ರಾಮ ಪಂಚಾಯತ್ ಸದ್ಯಸರು, ಆಶಾ ಕಾರ್ಯಕರ್ತರ ಸಭೆಯಲ್ಲಿ ಸಂಸದ ಅಣ್ಣಸಾಬ ಜೊಲ್ಲೆ ಹಾಗೂ ಅಧಿಕಾರಿಗಳು ಸಾಮಾಜಿಕ ಅಂತರ ಮರೆತು ಕೊರೊನಾ ನಿಯಮಗಳನ್ನು ಗಾಳಿಗೆ ತೂರಿರುವ ಘಟನೆ ನಡೆದಿದೆ.
ಸಂಸದರ ಸಭೆ ಬಳಿಕ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದು, ಜನಪ್ರತಿನಿಧಿಗಳೇ ನಿಮಯ ಮುರಿದರೆ ಹೇಗೆ ಎಂದು ಪ್ರಶ್ನಿಸುತ್ತಿದ್ದಾರೆ.
ಸಭೆಯಲ್ಲಿ ಗ್ರಾ.ಪಂ ಸದಸ್ಯರಿಗೆ ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ, ಹಾಗೂ ನಿಮ್ಮ ನಿಮ್ಮ ವಾರ್ಡ್ಗಳಲ್ಲಿ ಮನೆ ಮನೆಗೆ ತೆರಳಿ ಗ್ರಾಮಸ್ಥರ ಆರೋಗ್ಯ ವಿಚಾರಿಸುವಂತೆ ಚಿಕ್ಕೋಡಿ ಸಂಸದರು ಸಲಹೆ ನೀಡಿದ್ದಾರೆ.