ಬೆಳಗಾವಿ: ಇಂದು ಭಾರತ ಮತ್ತು ಪಾಕಿಸ್ತಾನ ನಡುವೆ ಏಷ್ಯಾ ಕಪ್ ಹೈವೋಲ್ಟೇಜ್ ಮ್ಯಾಚ್ ನಡೆಯಲಿದೆ. ಇದರಲ್ಲಿ ಭಾರತ ತಂಡ ಭರ್ಜರಿ ಗೆಲುವು ಸಾಧಿಸಲಿ ಎಂದು ಬೆಳಗಾವಿಯ ದರ್ಗಾವೊಂದರಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ಬೆಳಗಾವಿ ನಗರದ ಕೋಟೆ ಆವರಣದಲ್ಲಿರುವ ಬಾಬಾ ಬದರುದಿನಶಾ ವಲಿ ದರ್ಗಾದಲ್ಲಿ ಮುಸ್ಲಿಂ ಸಮುದಾಯದ ಯವಕರು, ಕಾಂಗ್ರೆಸ್ ಸೇವಾದಳದ ಯಂಗ್ ಬ್ರಿಗೇಡ್ ಕಾರ್ಯಕರ್ತರು ಭಾರತದ ಗೆಲುವಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ.